ADVERTISEMENT

ವಾಣಿಜ್ಯ ಬಳಕೆ ಸಿಲಿಂಡರ್‌ ದರ ₹25.5 ರಷ್ಟು ಇಳಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಅಕ್ಟೋಬರ್ 2022, 5:25 IST
Last Updated 1 ಅಕ್ಟೋಬರ್ 2022, 5:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರವನ್ನು ಶನಿವಾರ ₹25.5ರಷ್ಟು ಇಳಿಕೆ ಮಾಡಿವೆ. ಇದರಿಂದಾಗಿ ದೆಹಲಿಯಲ್ಲಿ 19 ಕೆ.ಜಿ ತೂಕದ ಸಿಲಿಂಡರ್‌ ದರ ₹1,885 ರಿಂದ ₹1,859ಕ್ಕೆ ಇಳಿಕೆ ಆಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆ ಆಗಿರುವುದರಿಂದ ಈ ಪರಿಷ್ಕರಣೆ ಮಾಡಲಾಗಿದೆ.

ಕೋಲ್ಕತ್ತದಲ್ಲಿ 19 ಕೆ.ಜಿ ತೂಕದ ಸಿಲಿಂಡರ್‌ ದರ ₹ 1,995.50ರಿಂದ ₹ 1,959 ಆಗಿದ್ದರೆ, ಮುಂಬೈನಲ್ಲಿ 19 ಕೆ.ಜಿ ತೂಕದ ಸಿಲಿಂಡರ್‌ ದರ ₹ 1,844 ರಿಂದ ₹ 1,811.50 ಮತ್ತು ಚೆನ್ನೈನಲ್ಲಿ 19 ಕೆ.ಜಿ ತೂಕದ ಸಿಲಿಂಡರ್‌ ದರ ₹ 2,009.50, ಬೆಂಗಳೂರಿನಲ್ಲಿ₹2100.0 ಇಳಿಕೆ ಆಗಿದೆ.

ADVERTISEMENT

ಸೆ.1ರಂದು ಸಿಲಿಂಡರ್‌ ದರವನ್ನು ₹ 91.5ರಷ್ಟು ಇಳಿಕೆ ಮಾಡಲಾಗಿತ್ತು. ಸ್ಥಳೀಯ ವ್ಯಾಟ್‌ಗೆ ಅನುಗುಣವಾಗಿ ಸಿಲಿಂಡರ್ ದರ ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.