ADVERTISEMENT

ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆ ₹91.50 ಕಡಿತ: ವರದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಫೆಬ್ರುವರಿ 2022, 5:29 IST
Last Updated 1 ಫೆಬ್ರುವರಿ 2022, 5:29 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಉದ್ದಿಮೆಗಳಲ್ಲಿ ಬಳಸುವ ವಾಣಿಜ್ಯ ಉದ್ದೇಶದ ಎಲ್‌ಪಿಜಿ ಸಿಲಿಂಡರ್‌ ದರ ಮಂಗಳವಾರ ₹91.50 ಕಡಿತವಾಗಲಿದೆ ಎಂದು ಮೂಲಗಳ ಮಾಹಿತಿ ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ರಾಷ್ಟ್ರೀಯ ತೈಲ ಮಾರಾಟ ಕಂಪನಿಗಳು ಬೆಲೆ ಇಳಿಕೆ ನಿರ್ಧಾರ ಕೈಗೊಂಡಿವೆ ಎನ್ನಲಾಗಿದ್ದು, ಇಂದಿನಿಂದಲೇ ಹೊಸ ದರ (ಫೆಬ್ರುವರಿ 1) ಜಾರಿಗೆ ಬರುವ ಸಾಧ್ಯತೆಗಳಿವೆ.

ಈ ತೀರ್ಮಾನದಿಂದ ದೆಹಲಿಯಲ್ಲಿ ವಾಣಿಜ್ಯ ಉದ್ದೇಶಕ್ಕೆ ಬಳಸುವ 19 ಕೆ.ಜಿ ಎಲ್‌ಪಿಜಿ ಸಿಲಿಂಡರ್‌ ದರ ₹1907 ಆಗಲಿದೆ.

ADVERTISEMENT

ಕೇಂದ್ರ ಸರ್ಕಾರ 2022–23ನೇ ಸಾಲಿನ ಬಜೆಟ್‌ ಅನ್ನು ಇಂದು ಮಂಡಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.