ADVERTISEMENT

ಎಫ್‌ಪಿಐ: ₹ 1 ಲಕ್ಷ ಕೋಟಿ ಹೊರಹರಿವು

ಪಿಟಿಐ
Published 29 ಮಾರ್ಚ್ 2020, 20:00 IST
Last Updated 29 ಮಾರ್ಚ್ 2020, 20:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೊರೊನಾ ವೈರಸ್‌ನಿಂದಾಗಿ ಜಾಗತಿಕ ಆರ್ಥಿಕ ಹಿಂಜರಿತದ ಸ್ಥಿತಿ ನಿರ್ಮಾಣವಾಗಿದ್ದು, ಭಾರತದ ಬಂಡವಾಳ ಮಾರುಕಟ್ಟೆಯಿಂದ ವಿದೇಶಿ ಬಂಡವಾಳ ಹೊರಹರಿವು ಹೆಚ್ಚಾಗುತ್ತಿದೆ.

ಮಾರ್ಚ್‌ ತಿಂಗಳಿನಲ್ಲಿ ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ₹ 1 ಲಕ್ಷ ಕೋಟಿ ಹಿಂದಕ್ಕೆ ಪಡೆದಿದ್ದಾರೆ. ನ್ಯಾಷನಲ್‌ ಸೆಕ್ಯುರಿಟೀಸ್‌ ಡೆಪಾಸಿಟರಿ ಲಿಮಿಟೆಡ್‌ ದತ್ತಾಂಶವನ್ನು ಸಂಗ್ರಹಿಸಲು ಆರಂಭಿಸಿದ ಬಳಿಕ ಗರಿಷ್ಠ ಮಟ್ಟದ ಬಂಡವಾಳ ಹೊರಹರಿವು ಇದಾಗಿದೆ. ಹೂಡಿಕೆದಾರರು ಮಾರ್ಚ್‌ 2 ರಿಂದ 27ರವರೆಗೆ ನಡೆದಿರುವ ವಹಿವಾಟಿನಲ್ಲಿ ₹59,377 ಕೋಟಿ ಮೌಲ್ಯದ ಷೇರುಗಳನ್ನು ಹಾಗೂ ₹ 52,811 ಕೋಟಿ ಮೌಲ್ಯದ ಸಾಲಪತ್ರಗಳನ್ನು ಮಾರಾಟ ಮಾಡಿದ್ದಾರೆ.

ಸೋಂಕು ಹರಡುವುದನ್ನು ನಿಯಂತ್ರಿಸಲು ಜಗತ್ತಿನೆಲ್ಲೆಡೆ ಲಾಕ್‌ಡೌನ್‌ ವಿಧಿಸಲಾಗಿದೆ. ಇದರಿಂದ ಹೂಡಿಕೆದಾರರು ಎಚ್ಚರಿಕೆಯಿಂದ ವಹಿವಾಟು ನಡೆಸುತ್ತಿದ್ದಾರೆ ಎಂದು ತಜ್ಞರು ಹೇಳಿದ್ದಾರೆ.2019ರ ಸೆಪ್ಟೆಂಬರ್‌ನಿಂದ ಫೆಬ್ರುವರಿಯವರೆಗೆ ನಿರಂತರವಾಗಿ ಹೂಡಿಕೆ ಮಾಡಿದ್ದರು.

ADVERTISEMENT

‘ಲಾಕ್‌ಡೌನ್‌ನಿಂದಾಗಿ ವಾಣಿಜ್ಯ ವಹಿವಾಟುಗಳು ಸ್ಥಗಿತಗೊಂಡಿವೆ. ಇದರಿಂದ ದೇಶಿ ಆರ್ಥಿಕ ಬೆಳವಣಿಗೆ ಇನ್ನಷ್ಟು ಮಂದಗತಿಗೆ ಇಳಿಯಲಿದೆ’ ಎಂದು ಮಾರ್ನಿಂಗ್‌ಸ್ಟಾರ್‌ ಇಂಡಿಯಾದ ಹಿರಿಯ ವಿಶ್ಲೇಷಕ ಹಿಮಾಂಶು ಶ್ರೀವಾಸ್ತವ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.