ADVERTISEMENT

ಕಾರ್ಪೊರೇಷನ್ ಬ್ಯಾಂಕ್‌ ಲಾಭ ₹103 ಕೋಟಿ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2019, 18:38 IST
Last Updated 3 ಆಗಸ್ಟ್ 2019, 18:38 IST

ಮಂಗಳೂರು: ಸರ್ಕಾರಿ ಸ್ವಾಮ್ಯದ ಕಾರ್ಪೊರೇಷನ್‌ ಬ್ಯಾಂಕ್‌, ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ₹ 103 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿದ್ದ ₹ 85 ಕೋಟಿ ಲಾಭಕ್ಕೆ ಹೋಲಿಸಿದರೆ ಈ ಬಾರಿ ಲಾಭದಲ್ಲಿ ಶೇ. 22ರಷ್ಟು ಏರಿಕೆಯಾಗಿದೆ.

ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತದಲ್ಲಿ ಇಳಿಕೆ ಆಗಿದೆ. ವಸೂಲಾಗದ ಸಾಲದ (ಎನ್‌ಪಿಎ) ಸರಾಸರಿ ಪ್ರಮಾಣ ಶೇ 17.44 ರಿಂದ ಶೇ 15.44ಕ್ಕೆ ಇಳಿಕೆಯಾಗಿದೆ. ನಿವ್ವಳ ಎನ್‌ಪಿಎ ಶೇ 11.46 ರಿಂದ ಶೇ 5.69ಕ್ಕೆ ಇಳಿಕೆಯಾಗಿದೆ.ಇದರಿಂದ ಲಾಭದಲ್ಲಿ ಏರಿಕೆಯಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ADVERTISEMENT

ಒಟ್ಟಾರೆ ವರಮಾನ ₹ 4,978 ಕೋಟಿಯಿಂದ ₹ 4,418 ಕೋಟಿಗೆ ಇಳಿಕೆಯಾಗಿದೆ.

₹1,85,443 ಕೋಟಿ ಠೇವಣಿ ಸಂಗ್ರಹಿಸಿದ್ದು, ಶೇ 5.6 ರಷ್ಟು ಪ್ರಗತಿಯಾಗಿದೆ. ₹1,21,437 ಕೋಟಿ ಮುಂಗಡ ನೀಡಲಾಗಿದ್ದು,ಶೇ 4.41 ರಷ್ಟು ವೃದ್ಧಿಯಾಗಿದೆ. ಒಟ್ಟು ₹ 3,06,880 ಕೋಟಿ ವಹಿವಾಟು ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.