ADVERTISEMENT

ಕೋವಿಡ್‌–19ಗೆ ಆಸ್ಪತ್ರೆ: ಸಿಎಸ್‌ಆರ್ ಅಡಿ ಪರಿಗಣನೆ

ಪಿಟಿಐ
Published 22 ಏಪ್ರಿಲ್ 2021, 16:28 IST
Last Updated 22 ಏಪ್ರಿಲ್ 2021, 16:28 IST

ನವದೆಹಲಿ: ತಾತ್ಕಾಲಿಕ ಆಸ್ಪತ್ರೆ ಮತ್ತು ಕೋವಿಡ್–19 ಆರೈಕೆ ಕೇಂದ್ರ ನಿರ್ಮಾಣಕ್ಕೆ ಕಾರ್ಪೊರೇಟ್ ಸಂಸ್ಥೆಗಳು ಮಾಡುವ ವೆಚ್ಚಗಳನ್ನು ಸಿಎಸ್‌ಆರ್‌ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ) ಚಟುವಟಿಕೆ ಎಂದು ಪರಿಗಣಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಈ ವಿಚಾರವಾಗಿ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಗುರುವಾರ ಸುತ್ತೋಲೆ ಹೊರಡಿಸಿದೆ. ದೇಶದಲ್ಲಿ ಹೊಸದಾಗಿ ಭಾರಿ ಸಂಖ್ಯೆಯಲ್ಲಿ ಕೋವಿಡ್–19 ಪ್ರಕರಣಗಳು ವರದಿಯಾಗುತ್ತಿರುವ ಸಂದರ್ಭದಲ್ಲಿ ಈ ತೀರ್ಮಾನ ಹೊರಬಿದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT