ನವದೆಹಲಿ: ಕಚ್ಚಾ ಹತ್ತಿಯನ್ನು ಸೆಪ್ಟೆಂಬರ್ 30ರವರೆಗೆ ಯಾವುದೇ ಸುಂಕ ಇಲ್ಲದೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರವು ಅನುಮತಿ ನೀಡಿದೆ. ದೇಶದ ಜವಳಿ ಉದ್ಯಮಕ್ಕೆ ಅಗತ್ಯವಾಗಿರುವ ಈ ಕಚ್ಚಾವಸ್ತುವಿನ ಲಭ್ಯತೆಯನ್ನು ಸುಧಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಇದುವರೆಗೆ ಹತ್ತಿಗೆ ಶೇಕಡ 11ರಷ್ಟು ಆಮದು ಸುಂಕ ವಿಧಿಸಲಾಗುತ್ತಿತ್ತು. ಇದರ ಜೊತೆಯಲ್ಲಿ ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ ಕೂಡ ಇತ್ತು.
ಕೇಂದ್ರ ಹಣಕಾಸು ಸಚಿವಾಲಯವು ಆಗಸ್ಟ್ 18ರಂದು ಹೊರಡಿಸಿರುವ ಅಧಿಸೂಚನೆ ಪ್ರಕಾರ, ಸುಂಕ ವಿನಾಯಿತಿಯು ಆಗಸ್ಟ್ 19ರಿಂದ ಜಾರಿಗೆ ಬಂದಿದೆ. ಸುಂಕ ವಿನಾಯಿತಿಯ ಪರಿಣಾಮವಾಗಿ ದೇಶದ ಜವಳಿ ವಲಯಕ್ಕೆ ಕಚ್ಚಾ ಹತ್ತಿಯು ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಒಡ್ಡಲು ಸಾಧ್ಯವಾಗುವ ದರದಲ್ಲಿ ಲಭ್ಯವಾಗುತ್ತದೆ ಎಂಬ ನಿರೀಕ್ಷೆ ಇದೆ.
ದೇಶದ ಜವಳಿ ವಲಯ ಸೇರಿದಂತೆ ವಿವಿಧ ವಲಯಗಳಿಂದ ಆಮದು ಮಾಡಿಕೊಳ್ಳುವ ಉತ್ಪನ್ನಗಳ ಮೇಲೆ ಅಮೆರಿಕವು ಶೇ 50ರಷ್ಟು ಸುಂಕ ವಿಧಿಸಿರುವ ಸಂದರ್ಭದಲ್ಲಿ ಈ ವಿನಾಯಿತಿಯ ನೆರವು ಜವಳಿ ವಲಯಕ್ಕೆ ದೊರೆತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.