ADVERTISEMENT

ಲಾಕ್‌ಡೌನ್ | ಏಪ್ರಿಲ್‌ ತಿಂಗಳಲ್ಲಿ ಶೂನ್ಯ ಮಾರಾಟ ದಾಖಲಿಸಿದ ಮಾರುತಿ ಸುಜುಕಿ

ರಾಯಿಟರ್ಸ್
Published 1 ಮೇ 2020, 5:55 IST
Last Updated 1 ಮೇ 2020, 5:55 IST
   

ಬೆಂಗಳೂರು: ಕೋವಿಡ್–19 ಭೀತಿಯಿಂದಾಗಿ ದೇಶದಾದ್ಯಂತ ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ಮಾರುತಿ ಸುಜುಕಿ ಇಂಡಿಯಾ ಕಂಪೆನಿಯು ಇದೇ ಮೊದಲ ಬಾರಿಗೆ ಏಪ್ರಿಲ್‌ ತಿಂಗಳಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಶೂನ್ಯ ಮಾರಾಟ ದಾಖಲಿಸಿದೆ.

ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಸರ್ಕಾರವು ಲಾಕ್‌ಡೌನ್‌ ಘೋಷಿಸುತ್ತಿದ್ದಂತೆ, ಕಾರು ತಯಾರಿಕಾ ಕಂಪೆನಿಯು ತನ್ನ ಕಾರ್ಯಾಚರಣೆ ಸ್ಥಗಿತಗೊಳಿಸಿತ್ತು.

ಈಗಾಗಲೇಮಂದಗತಿಯ ಆರ್ಥಿಕಪ್ರಗತಿ ಮತ್ತು ಬೇಡಿಕೆ ಕುಸಿತದಿಂದ ಬಳಲುತ್ತಿದ್ದ ವಾಹನ ತಯಾರಿಕಾ ಉದ್ಯಮದ ಮೇಲೆ ಲಾಕ್‌ಡೌನ್‌ ಮತ್ತಷ್ಟು ಪರಿಣಾಮ ಉಂಟುಮಾಡಿದೆ.

ADVERTISEMENT

ಸದ್ಯ ದೇಶದಲ್ಲಿ ಸೋಂಕಿತರ ಸಂಖ್ಯೆ 35 ಸಾವಿರ ದಾಟಿದೆ. 1,147 ಜನರು ಮೃತಪಟ್ಟಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.