ಬೆಂಗಳೂರು: ಜೆಮಿನಿ ಎಡಿಬಲ್ಸ್ ಆ್ಯಂಡ್ ಫ್ಯಾಟ್ಸ್ ಇಂಡಿಯಾ ಲಿಮಿಟೆಡ್ ಕಂಪನಿಯ ಫ್ರೀಡಂ ರಿಫೈನ್ಡ್ ಸನ್‌ಫ್ಲವರ್ ಆಯಿಲ್, ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರನ್ನು ತನ್ನ ಬ್ರ್ಯಾಂಡ್ ರಾಯಭಾರಿಯಾಗಿ ನೇಮಿಸಿದೆ.
ಈ ಸಹಯೋಗದ ಕಾರಣದಿಂದಾಗಿ ದ್ರಾವಿಡ್ ಅವರು ‘ಫ್ರೀಡಂ ರಿಫೈನ್ಡ್ ಸನ್‌ಫ್ಲವರ್ ಅಡುಗೆ ಎಣ್ಣೆ ಬಳಸಿ ಅಡುಗೆ ಮಾಡುವಂತೆ ಕುಟುಂಬಗಳನ್ನು ಪ್ರೇರೇಪಿಸಲಿದ್ದಾರೆ’ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.
‘ಫ್ರೀಡಂ ಕುಟುಂಬಕ್ಕೆ ದ್ರಾವಿಡ್ ಅವರನ್ನು ಸ್ವಾಗತಿಸಲು ನಮಗೆ ಹೆಮ್ಮೆ ಎನಿಸುತ್ತದೆ. ಅವರ ಶ್ರದ್ಧೆ, ಸಮತೋಲನ ಮತ್ತು ಸ್ಥಿರತೆಯು ನಮ್ಮ ಬ್ರ್ಯಾಂಡ್ ಹೊಂದಿರುವ ಮೌಲ್ಯಗಳನ್ನು ಪ್ರತಿಬಿಂಬಿಸುತ್ತವೆ’ ಎಂದು ಜೆಮಿನಿ ಎಡಿಬಲ್ಸ್ ಮತ್ತು ಫ್ಯಾಟ್ಸ್ ಇಂಡಿಯಾ ಲಿಮಿಟೆಡ್‌ನ ಮಾರಾಟ ಮತ್ತು ಮಾರ್ಕೆಟಿಂಗ್ ವಿಭಾಗದ ಹಿರಿಯ ಉಪಾಧ್ಯಕ್ಷ ಪಿ. ಚಂದ್ರಶೇಖರ ರೆಡ್ಡಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.