ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರವು ಗುರುವಾರ ಆರು ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿದಿದೆ.
ಪ್ರತೀ ಬ್ಯಾರೆಲ್‌ಗೆ 69.66 ಡಾಲರ್ ಆಗಿದೆ.
ಪೆಟ್ರೋಲಿಯಂ ಉತ್ಪನ್ನಗಳನ್ನು ರಫ್ತು ಮಾಡುವ ದೇಶಗಳ ಸಂಘಟನೆಯು (ಒಪೆಕ್) ಏಪ್ರಿಲ್‌ನಿಂದ ತೈಲ ಉತ್ಪಾದನೆ ಹೆಚ್ಚಿಸುವುದಾಗಿ ಘೋಷಿಸಿದೆ. ಇದರಿಂದ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ತೈಲ ಪೂರೈಕೆಯಾಗುವ ನಿರೀಕ್ಷೆಯಿದ್ದು, ಬೆಲೆ ಇಳಿಕೆಯಾಗಿದೆ. ಇದು ಭಾರತೀಯ ತೈಲ ಸಂಸ್ಕರಣಾಗಾರರ ಲಾಭವನ್ನು ಹೆಚ್ಚಿಸಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಮತ್ತೊಂದೆಡೆ ದರ ಇಳಿಕೆಯಿಂದಾಗಿ ತೈಲ ಉತ್ಪಾದನೆ ಕಂಪನಿಗಳ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ. ಡಾಲರ್ ಮೌಲ್ಯ ಇಳಿಕೆ ಹಾಗೂ ಚೀನಾದ ತಯಾರಿಕಾ ವಲಯದ ಪ್ರಗತಿಯು ತೈಲ ದರ ಇಳಿಕೆಗೆ ಸಹಕಾರಿಯಾಗಿವೆ ಎಂದು ಹೇಳಿದ್ದಾರೆ.
ವಿಮಾನಯಾನ ಕಂಪನಿ, ಪೇಂಟ್ಸ್ ಕಂಪನಿ ಮತ್ತು ಟೈಯರ್ ಕಂಪನಿಗಳ ಷೇರಿನ ಮೌಲ್ಯದಲ್ಲಿಯೂ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.