ನವದೆಹಲಿ: ಪ್ರಸಕ್ತ ತೈಲ ಮಾರುಕಟ್ಟೆ ವರ್ಷದ (ನವೆಂಬರ್‌ನಿಂದ ಅಕ್ಟೋಬರ್) ಮೊದಲ ಐದು ತಿಂಗಳ ಅವಧಿಯಲ್ಲಿ 19.11 ಲಕ್ಷ ಟನ್ ಕಚ್ಚಾ ಸೋಯಾಬೀನ್ ತೈಲವನ್ನು ಆಮದು ಮಾಡಿಕೊಳ್ಳಲಾಗಿದೆ ಎಂದು ಭಾರತೀಯ ಎಣ್ಣೆ ಗಿರಣಿ ಮಾಲೀಕರ ಸಂಘ (ಎಸ್‌ಇಎ) ತಿಳಿಸಿದೆ.
2023–24ನೇ ತೈಲ ಮಾರುಕಟ್ಟೆ ವರ್ಷದ ಇದೇ ಅವಧಿಯಲ್ಲಿ 8.82 ಲಕ್ಷ ಟನ್ ಆಮದಾಗಿತ್ತು. ಇದಕ್ಕೆ ಹೋಲಿಸಿದರೆ ಆಮದು ಪ್ರಮಾಣ 2 ಪಟ್ಟುಗಿಂತಲೂ ಹೆಚ್ಚಳವಾಗಿದೆ ಎಂದು ತಿಳಿಸಿದೆ.
ಕಚ್ಚಾ ಮತ್ತು ಸಂಸ್ಕರಿಸಿದ ತಾಳೆ ಎಣ್ಣೆ ಆಮದು ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರಿಂದ ಕಚ್ಚಾ ಸೋಯಾಬೀನ್ ತೈಲದ ಆಮದು ಹೆಚ್ಚಳವಾಗಿದೆ ಎಂದು ತಿಳಿಸಿದೆ.
ಅರ್ಜೆಂಟೀನಾ, ಬ್ರೆಜಿಲ್ ಮತ್ತು ರಷ್ಯಾದಿಂದ ಭಾರತಕ್ಕೆ ಈ ತೈಲವು ಆಮದಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.