ಬೆಂಗಳೂರು: ಬ್ಯಾಂಕ್‌ನ ಖಾತೆಯಲ್ಲಿರುವ ಗ್ರಾಹಕರ ಹಣ ಸದಾ ಸುರಕ್ಷಿತವಾಗಿರುತ್ತದೆ. ಹಾಗಾಗಿ, ಅನಗತ್ಯವಾಗಿ ಆತಂಕಪಡುವ ಅಗತ್ಯವಿಲ್ಲ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸ್ಪಷ್ಟನೆ ನೀಡಿದೆ.
ಕೆಲವು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಬ್ಯಾಂಕ್ ಬಗ್ಗೆ ವ್ಯತಿರಿಕ್ತವಾಗಿ ಸುದ್ದಿಗಳು ಪ್ರಸಾರವಾಗುತ್ತಿವೆ. ಗ್ರಾಹಕರು ಇದಕ್ಕೆ ಕಿವಿಗೊಡಬಾರದು ಎಂದು ಕೋರಿದೆ.
ಗ್ರಾಹಕರ ಒಪ್ಪಿಗೆಯಿಲ್ಲದೆ ಅಥವಾ ಸರ್ಕಾರಿ ಅಧಿಕಾರಿಗಳು, ನ್ಯಾಯಾಲಯಗಳು, ತೆರಿಗೆ ಪ್ರಾಧಿಕಾರಗಳಿಂದ ನಿರ್ದಿಷ್ಟ ಸೂಚನೆ ಇಲ್ಲದೆ ಗ್ರಾಹಕರ ಖಾತೆಯಿಂದ ಹಣ ತಡೆಹಿಡಿಯುವುದಿಲ್ಲ ಅಥವಾ ವರ್ಗಾಯಿಸುವುದಿಲ್ಲ. ಬ್ಯಾಂಕ್ ತನ್ನ ಗ್ರಾಹಕರ ಹಿತಾಸಕ್ತಿ ರಕ್ಷಣೆಗೆ ಬದ್ಧವಾಗಿದೆ ಎಂದು ಬ್ಯಾಂಕ್‌ನ ಸಹಾಯಕ ಪ್ರಧಾನ ವ್ಯವಸ್ಥಾಪಕರು (ವ್ಯಾಪಾರೋದ್ಯಮ ಮತ್ತು ಸಂಪರ್ಕ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.