ADVERTISEMENT

ಯುಪಿಐ ವಹಿವಾಟು ಏರಿಕೆ: ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್

ಪಿಟಿಐ
Published 6 ಮಾರ್ಚ್ 2023, 19:45 IST
Last Updated 6 ಮಾರ್ಚ್ 2023, 19:45 IST
ಶಕ್ತಿಕಾಂತ ದಾಸ್
ಶಕ್ತಿಕಾಂತ ದಾಸ್   

ಮುಂಬೈ: ಯುಪಿಐ ಮೂಲಕ ಆಗುತ್ತಿರುವ ಪಾವತಿಗಳು 12 ತಿಂಗಳಲ್ಲಿ ಭಾರಿ ಏರಿಕೆ ಕಂಡಿದ್ದು, ದಿನಕ್ಕೆ 36 ಕೋಟಿಗೂ ಹೆಚ್ಚು ವಹಿವಾಟುಗಳು ನಡೆಯುತ್ತಿವೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಇದು ಹಿಂದಿನ ವರ್ಷದ ಫೆಬ್ರುವರಿಯಲ್ಲಿನ ವಹಿವಾಟುಗಳಿಗೆ ಹೋಲಿಸಿದರೆ ಶೇಕಡ 50ರಷ್ಟು ಹೆಚ್ಚು.

ಮೌಲ್ಯದ ಲೆಕ್ಕದಲ್ಲಿ ಈ ವರ್ಷದ ಫೆಬ್ರುವರಿಯಲ್ಲಿ ಯುಪಿಐ ಮೂಲಕ ₹ 6.27 ಕೋಟಿಯಷ್ಟು ವಹಿವಾಟು ನಡೆದಿದೆ. ಇದು ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 17ರಷ್ಟು ಹೆಚ್ಚು ಎಂದು ದಾಸ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT