ADVERTISEMENT

ಜಿಎಸ್‌ಟಿ ವಾರ್ಷಿಕ ರಿಟರ್ನ್ಸ್‌ ಸಲ್ಲಿಕೆ ಗಡುವು ಡಿಸೆಂಬರ್ 31ರವರೆಗೆ ವಿಸ್ತರಣೆ

ಪಿಟಿಐ
Published 24 ಅಕ್ಟೋಬರ್ 2020, 10:42 IST
Last Updated 24 ಅಕ್ಟೋಬರ್ 2020, 10:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ (ಪಿಟಿಐ): 2018–19ನೇ ಹಣಕಾಸು ವರ್ಷಕ್ಕೆ ಜಿಎಸ್‌ಟಿ ವಾರ್ಷಿಕ ರಿಟರ್ನ್ಸ್‌ (ಜಿಎಸ್‌ಟಿಆರ್‌–9) ಸಲ್ಲಿಕೆ ಅವಧಿಯನ್ನು ಡಿಸೆಂಬರ್‌ 31ರವರೆಗೆ ವಿಸ್ತರಿಸಲಾಗಿದೆ.

ಕೇಂದ್ರ ಸರ್ಕಾರದ ಈ ಹಿಂದಿನ ಆದೇಶದ ಪ್ರಕಾರ, ಇದೇ ತಿಂಗಳ 31ರ ಒಳಗಾಗಿ ಜಿಎಸ್‌ಟಿ ವಾರ್ಷಿಕ ರಿಟರ್ನ್ಸ್‌ ಸಲ್ಲಿಸಬೇಕಿತ್ತು.

ಜಿಎಸ್‌ಟಿಆರ್‌–9 ಮತ್ತು ಜಿಎಸ್‌ಟಿಆರ್‌–9ಸಿ ಸಲ್ಲಿಸಲು ಇನ್ನೂ ಹೆಚ್ಚಿನ ಕಾಲಾವಕಾಶ ನೀಡುವಂತೆ ಉದ್ಯಮ ವಲಯವು ಸರ್ಕಾರಕ್ಕೆ ಮನವಿ ಮಾಡಿತ್ತು. ಲಾಕ್‌ಡೌನ್‌ ನಿರ್ಬಂಧಗಳಿಂದಾಗಿ ದೇಶದ ಹಲವು ಭಾಗಗಳಲ್ಲಿಇನ್ನೂ ವಾಣಿಜ್ಯ– ವಹಿವಾಟು ಸಹಜ ಸ್ಥಿತಿಗೆ ಬಂದಿಲ್ಲ. ಹೀಗಾಗಿ ಅವಧಿ ವಿಸ್ತರಿಸುವಂತೆ ಕೋರಿತ್ತು ಎಂದು ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್‌ನ ಕೇಂದ್ರೀಯ ಮಂಡಳಿಯು (ಸಿಬಿಐಸಿ) ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.