ಬೆಂಗಳೂರು: 16 ನೇ ಕೇಂದ್ರ ಹಣಕಾಸು ಆಯೋಗದೊಂದಿಗೆ ಗುರುವಾರ ಸಭೆ ನಡೆಯಲಿದ್ದು, ತೆರಿಗೆ ಹಂಚಿಕೆಯನ್ನು ಶೇ 41ರಿಂದ ಶೇ 50ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ವಿವರಿಸಲಾಗುವುದು ಎಂದು ಅವರು ಸುದ್ದಿಗಾರರಿಗೆ ಹೇಳಿದರು.
ಕರ್ನಾಟಕ ಹೆಚ್ಚು ನಿರ್ಲಕ್ಷ್ಯಕ್ಕೆ ಒಳಗಾದ ರಾಜ್ಯ ಎಂಬುದನ್ನು ಆಯೋಗಕ್ಕೆ ಮನದಟ್ಟು ಮಾಡಲಾಗುವುದು. ಸೆಸ್ ಮತ್ತು ಸರ್ಚಾರ್ಜ್‌ನಲ್ಲಿ ರಾಜ್ಯಗಳಿಗೂ ಪಾಲು ನೀಡಬೇಕು. ಸೆಸ್ ಮತ್ತು ಸರ್ಚಾರ್ಜ್‌ಗಳು ಹೆಚ್ಚುತ್ತಿದ್ದು, ರಾಜ್ಯಕ್ಕೆ ತೆರಿಗೆ ಹಂಚಿಕೆ ಕಡಿಮೆ ಆಗುತ್ತಿರುವುದನ್ನು ಹಣಕಾಸು ಆಯೋಗಕ್ಕೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.