ನವದೆಹಲಿ: ಕೇಂದ್ರ ಜಿಎಸ್‌ಟಿ ಗುಪ್ತಚರ ಮಹಾ ನಿರ್ದೇಶನಾಲಯವು (ಡಿಜಿಜಿಐ) ದೇಶದಲ್ಲಿ ಅಕ್ರಮವಾಗಿ ಕಾರ್ಯಾಚರಣೆ ನಡೆಸುತ್ತಿದ್ದ 357 ಆನ್‌ಲೈನ್ ಗೇಮಿಂಗ್ ಯುಆರ್‌ಎಲ್/ ವೆಬ್‌ಸೈಟ್‌ಗಳನ್ನು ಸ್ಥಗಿತಗೊಳಿಸಿದ್ದು, 2,400 ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿದೆ ಎಂದು ಹಣಕಾಸು ಸಚಿವಾಲಯವು ಶನಿವಾರ ತಿಳಿಸಿದೆ.
ವಿದೇಶದಿಂದ ಕಾರ್ಯಾಚರಣೆ ನಡೆಸುತ್ತಿರುವ ಈ ಗೇಮಿಂಗ್ ವೆಬ್‌ಸೈಟ್‌ಗಳನ್ನು ಸಾರ್ವಜನಿಕರು ಬಳಸುತ್ತಿದ್ದಾರೆ. ಇಂತಹ ಅಕ್ರಮ ವೇದಿಕೆಗಳಿಗೆ ಬಾಲಿವುಡ್ ನಟ, ನಟಿಯರು, ಕ್ರಿಕೆಟಿಗರು ಮತ್ತು ಸಾಮಾಜಿಕ ಜಾಲತಾಣದ ಇನ್‌ಪ್ಲುಯೆನ್ಸರ್‌ಗಳು ಕೂಡ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ತಿಳಿಸಿದೆ.
ಡಿಜಿಜಿಐ 700ಕ್ಕೂ ಹೆಚ್ಚು ಇ–ಗೇಮಿಂಗ್ ಕಂಪನಿಗಳ ವಿರುದ್ಧ ತನಿಖೆ ನಡೆಸಿದೆ. ನೋಂದಣಿ ಮಾಡದೆ ಜಿಎಸ್‌ಟಿ ವಂಚನೆ ಎಸಗುತ್ತಿರುವುದನ್ನು ಪತ್ತೆ ಹಚ್ಚಿದೆ. ಈ ಕಂಪನಿಗಳು ತೆರಿಗೆ ನಿಯಮಾವಳಿ ಉಲ್ಲಂಘನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ವಿವರಿಸಿದೆ.
ಅಲ್ಲದೆ, ಈ ಕಂಪನಿಗಳು ಅನ್ಯ ವ್ಯಕ್ತಿಗಳ ಬ್ಯಾಂಕ್ ಖಾತೆ ಬಳಸಿಕೊಂಡು ಹಣ ವರ್ಗಾವಣೆ ಮಾಡಿಕೊಳ್ಳುತ್ತವೆ. ಇಂತಹ 166 ಖಾತೆಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.