ADVERTISEMENT

ದೆಹಲಿಯ 6 ಕಡೆ ಡಿಜಿಜಿಐ ಅಧಿಕಾರಿಗಳ ದಾಳಿ: ನಕಲಿ ಐಟಿಸಿ ಪತ್ತೆ

ಪಿಟಿಐ
Published 11 ಜುಲೈ 2025, 15:33 IST
Last Updated 11 ಜುಲೈ 2025, 15:33 IST
   

ನವದೆಹಲಿ: ಪ್ರಕರಣವೊಂದರ ಭಾಗವಾಗಿ ದೆಹಲಿಯ ಆರು ಸ್ಥಳಗಳಲ್ಲಿ ಜಿಎಸ್‌ಟಿ ಗುಪ್ತಚರ ಮಹಾನಿರ್ದೇಶನಾಲಯದ (ಡಿಜಿಜಿಐ) ಬೆಂಗಳೂರು ವಲಯದ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.

ಈ ವೇಳೆ ₹266 ಕೋಟಿಗೂ ಹೆಚ್ಚು ಮೌಲ್ಯದ ನಕಲಿ ಇನ್‌ವಾಯ್ಸ್‌ ಮತ್ತು ಶೆಲ್‌ ಕಂಪನಿಗಳಿಂದ ₹48 ಕೋಟಿ ಮೌಲ್ಯದ ನಕಲಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ಐಟಿಸಿ) ಅನ್ನು ವರ್ಗಾಯಿಸಿರುವುದನ್ನು ಪತ್ತೆ ಹಚ್ಚಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಶುಕ್ರವಾರ ತಿಳಿಸಿದೆ.

ಬೆಂಗಳೂರಿನಲ್ಲಿ ಪ್ರಾರಂಭವಾದ ಪ್ರಕರಣವೊಂದರ ತನಿಖೆಗೆ ಸಂಬಂಧಿಸಿದಂತೆ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯದ ಬೆಂಗಳೂರು ವಲಯದ ಅಧಿಕಾರಿಗಳು ಈ ಶೋಧ ಕಾರ್ಯ ನಡೆಸಿದ್ದಾರೆ.

ADVERTISEMENT

ಈ ಕಂಪನಿಗಳ ಆವರಣದಲ್ಲಿ ನಡೆದ ಶೋಧದ ವೇಳೆ, ದಾಖಲೆಗಳು ಪತ್ತೆಯಾಗಿವೆ. ಪ್ರಕರಣದ ಪ್ರಮುಖ ಸಂಚುಕೋರನನ್ನು  ಬಂಧಿಸಲಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.