ನವದೆಹಲಿ: ಕೇಂದ್ರ ಸರ್ಕಾರವು ಶುಕ್ರವಾರ ಡಿಜಿಟಲ್ ವೈಯಕ್ತಿಕ ದತ್ತಾಂಶ ರಕ್ಷಣೆ ಕುರಿತ ಕರಡು ನಿಯಮಾವಳಿಗಳನ್ನು ಬಿಡುಗಡೆ ಮಾಡಿದೆ. ಆದರೆ, ನಿಯಮಾವಳಿ ಉಲ್ಲಂಘಿಸಿದರೆ ದಂಡ ವಿಧಿಸುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ.
ಕರಡು ನಿಯಮಾವಳಿಗಳ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಕ್ರೋಡೀಕರಿಸಲಿದೆ. ಫೆಬ್ರುವರಿ 18ರ ಬಳಿಕ ಅಂತಿಮವಾಗಿ ಅಧಿಸೂಚನೆ ಹೊರಡಿಸಲಿದೆ.
ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆ 2023ರ ಸೆಕ್ಷನ್ 40ರ ಸಬ್ ಸೆಕ್ಷನ್ (1) ಮತ್ತು (2) ಅಡಿ ನೀಡಿರುವ ಅಧಿಕಾರ ಚಲಾಯಿಸುವುದಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರವು ಈ ನಿಯಮಾವಳಿಗಳನ್ನು ರೂಪಿಸಿದೆ. ಕರಡು ನಿಯಮಾವಳಿ ಜಾರಿಯ ನಂತರ ಅದು ಪರಿಣಾಮ ಬೀರುವ ವ್ಯಕ್ತಿಗಳ ಮಾಹಿತಿಗಾಗಿ ಇದನ್ನು ಪ್ರಕಟಿಸಲಾಗಿದೆ ಎಂದು ಕರಡು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.