ನವದೆಹಲಿ: ಡಿಜಿಟಲ್ ವಂಚನೆ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪ್ರಸಕ್ತ ವರ್ಷದಲ್ಲಿ ಫೆಬ್ರುವರಿವರೆಗೆ 7.81 ಲಕ್ಷ ಸಿಮ್ ಕಾರ್ಡ್ ಬಳಕೆಗೆ ನಿರ್ಬಂಧ ಹೇರಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಪೊಲೀಸ್ ಅಧಿಕಾರಿಗಳು ನೀಡಿರುವ 2.08 ಲಕ್ಷ ಅಂತರರಾಷ್ಟ್ರೀಯ ಮೊಬೈಲ್ ಸಲಕರಣೆ ಗುರುತು ಸಂಖ್ಯೆಗಳಿಗೂ ನಿರ್ಬಂಧ ವಿಧಿಸಲಾಗಿದೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಅವರು, ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಡಿಜಿಟಲ್ ಅರೆಸ್ಟ್ ಕೃತ್ಯಕ್ಕೆ ಬಳಕೆಯಾಗುತ್ತಿದ್ದ 3,962 ಸ್ಪೈಪ್ ಐಡಿ ಹಾಗೂ 83,668 ವಾಟ್ಸ್‌ಆ್ಯಪ್ ಖಾತೆಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.