ನವದೆಹಲಿ: ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ದೇಶದ ವಿವಿಧೆಡೆ ಕಾರ್ಯಾಚರಣೆ ನಡೆಸಿ ನಕಲಿ ನೋಟು ತಯಾರಿಸುತ್ತಿದ್ದ ಏಳು ಘಟಕಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಶುಕ್ರವಾರ ತಿಳಿಸಿದೆ.
ಮಹಾರಾಷ್ಟ್ರ, ಹರಿಯಾಣ, ತೆಲಂಗಾಣ, ತಮಿಳುನಾಡು ಹಾಗೂ ಬಿಹಾರದ ಒಟ್ಟು 11 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ₹50 ಹಾಗೂ ₹100 ಮುಖಬೆಲೆಯ ನಕಲಿ ನೋಟುಗಳ ಮುದ್ರಣದಲ್ಲಿ ತೊಡಗಿದ್ದನ್ನು ಪತ್ತೆ ಹಚ್ಚಿದ್ದಾರೆ ಎಂದು ತಿಳಿಸಿದೆ.
ಕಾನೂನುಬಾಹಿರ ಕೃತ್ಯದಲ್ಲಿ ತೊಡಗಿದ್ದ ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಲಾಗಿದೆ. ಬಂಧಿತರಿಂದ ಲ್ಯಾಪ್‌ಟಾಪ್, ಪೆನ್ ಡ್ರೈವ್ ಸೇರಿದಂತೆ ನೋಟು ತಯಾರಿಸಲು ಬಳಸುತ್ತಿದ್ದ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.