ನವದೆಹಲಿ: ಡಿ–ಮಾರ್ಟ್ ಮಳಿಗೆಗಳ ಒಡೆತನ ಹೊಂದಿರುವ ಅವೆನ್ಯು ಸೂಪರ್‌ಮಾರ್ಟ್ಸ್ ಕಂಪನಿಯ ವರಮಾನವು 2025–26ರ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ₹15,932 ಕೋಟಿಯಾಗಿದೆ.
ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹13,711 ಕೋಟಿ ವರಮಾನ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಶೇ 16ರಷ್ಟು ಏರಿಕೆಯಾಗಿದೆ ಎಂದು ಕಂಪನಿ ಷೇರುಪೇಟೆಗೆ ತಿಳಿಸಿದೆ.
ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶ, ಮಧ್ಯಪ್ರದೇಶ, ಕರ್ನಾಟಕ, ತೆಲಂಗಾಣ, ಛತ್ತೀಸಗಢ, ಎನ್‌ಸಿಆರ್, ತಮಿಳುನಾಡು, ಪಂಜಾಬ್ ಮತ್ತು ರಾಜಸ್ಥಾನದಲ್ಲಿ ಕಂಪನಿ ಒಟ್ಟು 424 ಮಳಿಗೆಗಳನ್ನು ಹೊಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.