ADVERTISEMENT

ಮೇ ತಿಂಗಳಿನಲ್ಲಿ ದೇಶೀಯ ವಿಮಾನ ಪ್ರಯಾಣಿಕರ ಸಂಖ್ಯೆ ಹೆಚ್ಚಳ

ಪಿಟಿಐ
Published 6 ಜೂನ್ 2024, 14:10 IST
Last Updated 6 ಜೂನ್ 2024, 14:10 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ಮೇ ತಿಂಗಳಿನಲ್ಲಿ ದೇಶೀಯ ವಿಮಾನ ಮಾರ್ಗದಲ್ಲಿ 1.38 ಕೋಟಿ ಪ್ರಯಾಣಿಕರು ಸಂಚರಿಸಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 5.1ರಷ್ಟು ಏರಿಕೆಯಾಗಿದೆ.

ಪ್ರಯಾಣಿಕರ ಸಂಖ್ಯೆಯು ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿದ್ದಕ್ಕಿಂತ ಶೇ 14ರಷ್ಟು ಹೆಚ್ಚಳವಾಗಿದೆ ಎಂದು ಕ್ರೆಡಿಟ್‌ ರೇಟಿಂಗ್‌ ಏಜೆನ್ಸಿ ಐಸಿಆರ್‌ಎ ಗುರುವಾರ ತಿಳಿಸಿದೆ.

‘ಟಿಕೆಟ್‌ ದರದಲ್ಲಿ ಹೆಚ್ಚಿನ ವ್ಯತ್ಯಾಸವಾಗಿಲ್ಲ. ಹಾಗಾಗಿ, ದೇಶೀಯ ಹಾಗೂ ಅಂತರರಾಷ್ಟ್ರೀಯ ಮಾರ್ಗದಲ್ಲಿನ ಪ್ರಯಾಣಿಕರ ಸಂಖ್ಯೆಯಲ್ಲಿ ಚೇತರಿಕೆ ಕಂಡುಬಂದಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ’ ಎಂದು ಹೇಳಿದೆ.

ADVERTISEMENT

ವಿಮಾನಯಾನ ಕಂಪನಿಗಳ ಕಾರ್ಯಾಚರಣೆಯಲ್ಲೂ ಶೇ 6ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದೆ. 

Cut-off box - null

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.