ವಿಮಾನ
ಸಾಂಕೇತಿಕ ಚಿತ್ರ
ನವದೆಹಲಿ: ಏಪ್ರಿಲ್‌ನಲ್ಲಿ ದೇಶೀಯ ಮಾರ್ಗದ ವಿಮಾನಗಳಲ್ಲಿ 1.43 ಕೋಟಿ ಪ್ರಯಾಣಿಕರು ಸಂಚರಿಸಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ.
ಕಳೆದ ವರ್ಷದ ಏಪ್ರಿಲ್‌ನಲ್ಲಿ 1.32 ಕೋಟಿ ಪ್ರಯಾಣಿಕರು ಸಂಚರಿಸಿದ್ದರು. ಇದಕ್ಕೆ ಹೋಲಿಸಿದರೆ ಶೇ 8.45ರಷ್ಟು ಏರಿಕೆಯಾಗಿದೆ ಎಂದು ಬುಧವಾರ ತಿಳಿಸಿದೆ.
ಇಂಡಿಗೊ ವಿಮಾನಗಳಲ್ಲಿ ಶೇ 64.1ರಷ್ಟು ಪ್ರಯಾಣಿಕರು ಸಂಚರಿಸಿದ್ದಾರೆ. ಏರ್ ಇಂಡಿಯಾ ಶೇ 27.2, ಆಕಾಸಾ ಏರ್ ಶೇ 5 ಮತ್ತು ಸ್ಪೈಸ್‌ಜೆಟ್‌ನಲ್ಲಿ ಶೇ 2.6ರಷ್ಟು ಪ್ರಯಾಣಿಕರು ಸಂಚರಿಸಿದ್ದಾರೆ.
ಪ್ರಸಕ್ತ ವರ್ಷದ ಜನವರಿಯಿಂದ ಏಪ್ರಿಲ್‌ವರೆಗೆ 5.75 ಕೋಟಿ ಪ್ರಯಾಣಿಕರು ಸಂಚರಿಸಿದ್ದಾರೆ. ಕಳೆದ ವರ್ಷದ ಇದೇ ಅವಧಿಯಲ್ಲಿ 5.23 ಕೋಟಿ ಜನರು ಪ್ರಯಾಣಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.