ADVERTISEMENT

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ₹3.5 ಏರಿಕೆ: ಸಾವಿರ ಗಡಿ ದಾಟಿದ ಅಡುಗೆ ಅನಿಲ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಮೇ 2022, 4:46 IST
Last Updated 19 ಮೇ 2022, 4:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ₹ 3.5 ಹೆಚ್ಚಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ₹1003 ರಷ್ಟಿದೆ.

ಬೆಂಗಳೂರಿನಲ್ಲಿ ಗುರುವಾರ 14.2 ಕೆ.ಜಿ ತೂಕದ ಸಿಲಿಂಡರ್‌ ದರ ₹ 1002.50 ಕ್ಕೆ ಏರಿಕೆ ಆಗಿದೆ. ಬುಧವಾರದವರೆಗೆ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ₹999.50 ರಷ್ಟಿತ್ತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಗೆ ಅನುಗುಣವಾಗಿ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಸಿಲಿಂಡರ್‌ ದರದಲ್ಲಿ ಏರಿಕೆ ಮಾಡಿವೆ.

ADVERTISEMENT

ಸಬ್ಸಿಡಿ ಇಲ್ಲದೇ ಇರುವುದರಿಂದ ಎಲ್‌ಪಿಜಿ ಸಿಲಿಂಡರ್‌ಗೆ ಪಾವತಿಸಬೇಕಿರುವ ಇದುವರೆಗಿನ ಗರಿಷ್ಠ ದರ ಇದಾಗಿದೆ. ಮೇ 7ರಂದು ₹ 50ರಷ್ಟು ಹೆಚ್ಚಳ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.