
ನವದೆಹಲಿ: ತಯಾರಿಕೆಗೆ ಉತ್ತೇಜನ ನೀಡಲು ಮತ್ತು ನವೋದ್ಯಮಗಳಿಗೆ ಪೂರಕವಾದ ನಾವೀನ್ಯ ಪರಿಸರದ ವ್ಯವಸ್ಥೆ ರೂಪಿಸಲು ಐಟಿಸಿ, ಫ್ಲಿಪ್‌ಕಾರ್ಟ್, ಮರ್ಸಿಡಿಸ್ ಬೆಂಜ್ ಸೇರಿದಂತೆ 50ಕ್ಕೂ ಹೆಚ್ಚು ಕಂಪನಿಗಳೊಂದಿಗೆ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನಾ ಇಲಾಖೆ (ಡಿಪಿಐಐಟಿ) ಒಪ್ಪಂದ ಮಾಡಿಕೊಂಡಿದೆ.
ಈ ಕುರಿತ ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೋಟ್, ಎಚ್‌ಡಿಎಫ್‌ಸಿ ಕ್ಯಾಪಿಟಲ್ ಅಡ್ವೈಸರ್ಸ್, ಹೀರೊ ಮೋಟೊ, ಜೆಪ್ಟೊ, ಕೋಟಕ್ ಮಹೀಂದ್ರ ಬ್ಯಾಂಕ್, ಯೆಸ್ ಬ್ಯಾಂಕ್, ಪೇಟಿಎಂ, ವಾಲ್‌ಮಾರ್ಟ್ ಮತ್ತು ಏಥರ್ ಎನರ್ಜಿ ಒಪ್ಪಂದ ಮಾಡಿಕೊಂಡ ಕಂಪನಿಗಳ ಪಟ್ಟಿಯಲ್ಲಿವೆ.
ಈ ಒಪ್ಪಂದದ ಭಾಗವಾಗಿ ನವೋದ್ಯಮಗಳಿಗೆ ಪೂರಕವಾದ ವ್ಯವಸ್ಥೆಗೆ ಉತ್ತೇಜನ ನೀಡಲಾಗುವುದು. ನವೋದ್ಯಮಗಳ ಆರಂಭಿಕ ಹಂತದಲ್ಲಿ ಅಗತ್ಯವಾಗಿ ಬೇಕಿರುವ ಎಲ್ಲ ನೆರವು ಒದಗಿಸುವ ತಯಾರಿಕಾ ವಲಯದ ಇನ್ಕ್ಯುಬೇಟರ್‌ಗಳನ್ನು ಅಭಿವೃದ್ಧಿಪಡಿಸುವ ಮೂಲಕ ಉತ್ಪಾದನೆಯಲ್ಲಿ ನಾವೀನ್ಯವನ್ನು ಹೆಚ್ಚಿಸುವ ಉದ್ದೇಶ ಇದೆ ಎಂದು ಅಧಿಕಾರಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.