ನವದೆಹಲಿ: ಅಸಂಘಟಿತ ವಲಯದ ಕಾರ್ಮಿಕರಿಗೆ ಒಂದೇ ಸೂರಿನಡಿ ಸರ್ಕಾರದ ಹಲವು ಯೋಜನೆಯಡಿ ಸವಲತ್ತು ಒದಗಿಸುವ ಇ–ಶ್ರಮ್ ಪೋರ್ಟಲ್ ಇನ್ನು ಮುಂದೆ 22 ಭಾಷೆಗಳಲ್ಲಿ ಲಭ್ಯವಾಗಲಿದೆ.
ಈ ಮೊದಲು ಇಂಗ್ಲಿಷ್, ಹಿಂದಿ, ಕನ್ನಡ ಮತ್ತು ಮರಾಠಿ ಭಾಷೆಯಲ್ಲಿ ಮಾತ್ರ ಇ–ಶ್ರಮ್ ಒನ್ ಸ್ಟಾಪ್–ಒನ್ ಸಲ್ಯೂಷನ್ ಪೋರ್ಟಲ್ ಲಭ್ಯವಿತ್ತು. ಈಗ ಇದನ್ನು ನವೀಕರಿಸಲಾಗಿದ್ದು, ಸಂವಿಧಾನದ 8ನೇ ಪರಿಚ್ಛೇದದಲ್ಲಿ ಮಾನ್ಯತೆ ಪಡೆದಿರುವ ಎಲ್ಲಾ ಭಾಷೆಗಳಲ್ಲಿಯೂ ದೊರೆಯಲಿದೆ.
ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನ್ಸುಖ್ ಮಾಂಡವೀಯ ಅವರು ಮಂಗಳವಾರ ಈ ಪೋರ್ಟಲ್‌ಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಕಾರ್ಮಿಕರಲ್ಲಿ ಇ–ಶ್ರಮ್ ಪೋರ್ಟಲ್ ಬಗ್ಗೆ ವಿಶ್ವಾಸ ಹೆಚ್ಚಾಗುತ್ತಿದೆ. ದಿನಕ್ಕೆ ಸರಾಸರಿ 30 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಹೆಸರು ನೋಂದಣಿ ಮಾಡಿಕೊಳ್ಳುತ್ತಿದ್ದಾರೆ ಎಂದರು.
ಇಲ್ಲಿಯವರೆಗೆ ಇ–ಶ್ರಮ್ ಪೋರ್ಟಲ್‌ನಲ್ಲಿ ಕೇಂದ್ರ ಸಚಿವಾಲಯ ಹಾಗೂ ಇಲಾಖೆಗಳ 12 ಯೋಜನೆಗಳನ್ನು ಸಂಯೋಜಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.