ADVERTISEMENT

ಇ.ಡಿ.ಯಿಂದ ಎಬಿಜಿ ಶಿಪ್‌ಯಾರ್ಡ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ

ಪಿಟಿಐ
Published 17 ಫೆಬ್ರುವರಿ 2022, 11:03 IST
Last Updated 17 ಫೆಬ್ರುವರಿ 2022, 11:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಬ್ಯಾಂಕ್‌ಗಳ ಒಕ್ಕೂಟಕ್ಕೆ ₹ 22,842 ಕೋಟಿ ಮೊತ್ತದ ವಂಚನೆ ಎಸಗಿರುವ ಆರೋಪದ ಅಡಿ ಜಾರಿ ನಿರ್ದೇಶನಾಲಯವು (ಇ.ಡಿ.) ಎಬಿಜಿ ಶಿಪ್‌ಯಾರ್ಡ್‌ ಲಿಮಿಟೆಡ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ.

ದೇಶದ ಅತಿದೊಡ್ಡ ಬ್ಯಾಂಕಿಂಗ್ ವಂಚನೆ ಪ್ರಕರಣದ ಸಂಬಂಧ ಸಿಬಿಐ ಪ್ರಕರಣ ದಾಖಲಿಸಿದ ಬಳಿಕ ಇ.ಡಿ. ಈ ಕ್ರಮ ಕೈಗೊಂಡಿದೆ.

ಸಿಬಿಐ ಸಲ್ಲಿಕೆಯಾದ ದೂರು ಮತ್ತು ಲೆಕ್ಕಪತ್ರ ವರದಿಯನ್ನು ಪರಿಶೀಲಿಸಿದ ಬಳಿಕ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ವಂಚನೆಗೆ ಸಂಬಂಧಿಸಿದಂತೆ ಕಂಪನಿಯ ಮಾಜಿ ಅಧ್ಯಕ್ಷ ರಿಶಿ ಕಮಲೇಶ್‌ ಅಗರ್ವಾಲ್‌ ಮತ್ತು ಮಾಜಿ ಕಾರ್ಯನಿರ್ವಾಹಕ ನಿರ್ದೇಶಕರಾದ ಸಂತಾನಂ ಮುತ್ತಸ್ವಾಮಿ, ನಿರ್ದೆಶಕ ಅಶ್ವನಿ ಕುಮಾರ್‌, ಸುಶಿಲ್‌ ಕುಮಾರ್‌ ಅಗರ್ವಾಲ್‌, ರವಿ ವಿಮಲ್‌ ನವೇಟಿಯಾ ಹಾಗೂ ಎಬಿಜಿ ಇಂಟರ್‌ನ್ಯಾಷನಲ್‌ ಪ್ರೈವೇಟ್‌ ಲಿಮಿಟೆಡ್‌ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.