ADVERTISEMENT

ಫ್ಲಿಪ್‌ಕಾರ್ಟ್‌ಗೆ ಇ.ಡಿ. ನೋಟಿಸ್

ಪಿಟಿಐ
Published 5 ಆಗಸ್ಟ್ 2021, 16:22 IST
Last Updated 5 ಆಗಸ್ಟ್ 2021, 16:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಜಾರಿ ನಿರ್ದೇಶನಾಲಯವು (ಇ.ಡಿ.) ಫ್ಲಿಪ್‌ಕಾರ್ಟ್‌ ಕಂಪನಿ ಮತ್ತು ಅದರ ಪ್ರವರ್ತಕರಿಗೆ ಅಂದಾಜು ₹ 10,600 ಕೋಟಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಎಫ್‌ಇಎಂಎ) ಉಲ್ಲಂಘನೆಗೆ ಸಂಬಂಧಿಸಿದಂತೆ ಈ ನೋಟಿಸ್ ಜಾರಿಗೊಳಿಸಲಾಗಿದೆ.

ಫ್ಲಿಪ್‌ಕಾರ್ಟ್‌, ಅದರ ಸಂಸ್ಥಾಪಕರಾದ ಸಚಿನ್ ಬನ್ಸಾಲ್, ಬಿನ್ನಿ ಬನ್ಸಾಲ್ ಸೇರಿದಂತೆ 10 ಜನರಿಗೆ ಹಿಂದಿನ ತಿಂಗಳು ನೋಟಿಸ್ ಜಾರಿಯಾಗಿದೆ ಎಂದು ಮೂಲಗಳು ತಿಳಿಸಿವೆ. ತನಿಖೆಯನ್ನು ಪೂರ್ಣಗೊಳಿಸಿದ ನಂತರವೇ ಈ ನೋಟಿಸ್ ಜಾರಿಗೊಳಿಸಲಾಗಿದೆ. ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ನಿಯಮ ಹಾಗೂ ಬಹುಬ್ರ್ಯಾಂಡ್‌ ಚಿಲ್ಲರೆ ಮಾರಾಟಕ್ಕೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆಯ ಆರೋಪವನ್ನು ಇವರ ಮೇಲೆ ಹೊರಿಸಲಾಗಿದೆ ಎಂದು ಗೊತ್ತಾಗಿದೆ.

ತಾನು ನಿಯಮಗಳನ್ನು ಪಾಲಿಸಿರುವುದಾಗಿ, ಇ.ಡಿ. ತನಿಖೆಗೆ ಸಹಕರಿಸುತ್ತಿರುವುದಾಗಿ ಫ್ಲಿಪ್‌ಕಾರ್ಟ್‌ ಹೇಳಿದೆ. ಸಚಿನ್ ಮತ್ತು ಬಿನ್ನಿ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ. ಎಫ್‌ಡಿಐ ನಿಯಮಗಳನ್ನು ಫ್ಲಿಪ್‌ಕಾರ್ಟ್‌ ಉಲ್ಲಂಘಿಸಿದ ಎಂಬ ಆರೋಪದ ಬಗ್ಗೆ ಇ.ಡಿ. 2012ರಿಂದಲೂ ಪರಿಶೀಲನೆ ನಡೆಸುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.