ಅನಿಲ್ ಅಂಬಾನಿ
ನವದೆಹಲಿ: ಕೋಟ್ಯಂತರ ರೂಪಾಯಿ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಆ.5ರಂದು ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ಜಾರಿ ಮಾಡಿದೆ.
66 ವರ್ಷದ ಅನಿಲ್ ಅವರನ್ನು ದೆಹಲಿಯ ಇ.ಡಿ ಕೇಂದ್ರ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಅನಿಲ್ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಿದೆ. ಮುಂದಿನ ದಿನಗಳಲ್ಲಿ ಸಮೂಹಕ್ಕೆ ಸೇರಿದ ಕಾರ್ಯನಿರ್ವಾಹಕರಿಗೂ ಸಮನ್ಸ್ ನೀಡಲಾಗುತ್ತದೆ.
ಕಳೆದ ವಾರ 50 ಕಂಪನಿಗಳ 35 ಪ್ರದೇಶಗಳು ಹಾಗೂ ಸಮೂಹ ಸಂಸ್ಥೆಗಳ ಕಾರ್ಯನಿರ್ವಾಹಕರು ಸೇರಿದಂತೆ 25 ವ್ಯಕ್ತಿಗಳಿಗೆ ಸೇರಿದ ಜಾಗಗಳಲ್ಲಿ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.
ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ಸೇರಿದಂತೆ ಅನಿಲ್ ಅಂಬಾನಿ ಅವರ ಬಹು ಸಮೂಹ ಸಂಸ್ಥೆಗಳಿಂದ ₹17 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ಹಣ ಅಕ್ರಮ ನಡೆಸಿರುವುದರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.