ನವದೆಹಲಿ (ಪಿಟಿಐ): ದೇಶದ ಎಂಟು ಮೂಲಸೌಕರ್ಯ ವಲಯಗಳ ಬೆಳವಣಿಗೆ ಮೇ ತಿಂಗಳಿನಲ್ಲಿ ಶೇ 0.7ಕ್ಕೆ ಇಳಿಕೆಯಾಗಿದೆ. ಇದು 9 ತಿಂಗಳ ಕನಿಷ್ಠ ಮಟ್ಟವಾಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.
ಪ್ರಸಕ್ತ ವರ್ಷದ ಏಪ್ರಿಲ್‌ನಲ್ಲಿ ಶೇ 1ರಷ್ಟಿತ್ತು. ಕಳೆದ ವರ್ಷದ ಮೇ ತಿಂಗಳಲ್ಲಿ ಶೇ 6.9 ರಷ್ಟಿತ್ತು ಎಂದು ತಿಳಿಸಿದೆ.
ಕಚ್ಚಾ ತೈಲ, ನೈಸರ್ಗಿಕ ಅನಿಲ, ರಸಗೊಬ್ಬರ ಮತ್ತು ವಿದ್ಯುತ್ ಉತ್ಪಾದನೆಯಲ್ಲಿ ಪ್ರಗತಿ ಇಳಿಕೆಯಾಗಿದೆ. ಇದರಿಂದ ಬೆಳವಣಿಗೆಯು ಕುಂಠಿತಗೊಂಡಿದೆ ಎಂದು ತಿಳಿಸಿದೆ.
ಸಂಸ್ಕರಿಸಿದ ಉತ್ಪನ್ನಗಳು ಮತ್ತು ಸಿಮೆಂಟ್ ಉತ್ಪಾದನೆಯಲ್ಲಿ ಏರಿಕೆಯಾಗಿದೆ. ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ವಲಯದ ಬೆಳವಣಿಗೆ ಶೇ 0.8ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.