ADVERTISEMENT

ಏಪ್ರಿಲ್‌–ಆಗಸ್ಟ್‌ ಅವಧಿಯಲ್ಲಿ ಎಂಜಿನಿಯರಿಂಗ್‌ ಸರಕುಗಳ ರಫ್ತು ಇಳಿಕೆ

ಪಿಟಿಐ
Published 28 ಸೆಪ್ಟೆಂಬರ್ 2020, 13:28 IST
Last Updated 28 ಸೆಪ್ಟೆಂಬರ್ 2020, 13:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೋಲ್ಕತ್ತ: ಎಂಜಿನಿಯರಿಂಗ್‌ ಸರಕುಗಳ ರಫ್ತು ಪ್ರಮಾಣವು ಏಪ್ರಿಲ್‌–ಆಗಸ್ಟ್‌ ಅವಧಿಯಲ್ಲಿ ಶೇಕಡ 18ರಷ್ಟು ಇಳಿಕೆಯಾಗಿದೆ ಎಂದು ಎಂಜಿನಿಯರಿಂಗ್‌ ರಫ್ತು ಉತ್ತೇಜನ ಮಂಡಳಿ (ಇಇಪಿಸಿ) ತಿಳಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 2.32 ಲಕ್ಷ ಕೋಟಿ ಮೌಲ್ಯದ ಸರಕುಗಳು ರಫ್ತಾಗಿದ್ದವು. ಈ ಬಾರಿ ₹ 1.89 ಲಕ್ಷ ಕೋಟಿ ಮೌಲ್ಯದ ಸರಕುಗಳು ರಪ್ತಾಗಿವೆ.

‘ಕೋವಿಡ್‌–19 ಸಾಂಕ್ರಾಮಿಕದಿಂದಾಗಿ ಒಟ್ಟಾರೆ ರಫ್ತು ಮಾರುಕಟ್ಟೆಯೇ ಸವಾಲಿನಿಂದ ಕೂಡಿದೆ. ಉತ್ತರ ಏಷ್ಯಾದ ಕೆಲವು ದೇಶಗಳಲ್ಲಿ ಕೈಗಾರಿಕಾ ಚಟುವಟಿಕೆಗಳು ಚೇತರಿಸಿಕೊಂಡಿವೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಮಾರುಕಟ್ಟೆಯೂ ಚೇತರಿಸಿಕೊಳ್ಳುವ ನಿರೀಕ್ಷೆ ಇದೆ’ ಎಂದು ಇಇಪಿಸಿ ಇಂಡಿಯಾದ ಅಧ್ಯಕ್ಷ ಮಹೇಶ್‌ ದೇಸಾಯಿ ತಿಳಿಸಿದ್ದಾರೆ.

ADVERTISEMENT

ಕಬ್ಬಿಣ, ಉಕ್ಕು, ತಾಮ್ರ ಮತ್ತು ಸತುವಿನ ರಫ್ತಿನಲ್ಲಿ ಸುಧಾರಣೆ ಕಂಡುಬರುತ್ತಿದೆ. ಆದರೆ ಮೌಲ್ಯವರ್ಧಿತ ಕಬ್ಬಿಣ ಮತ್ತು ಉಕ್ಕಿನ ಉತ್ಪನ್ನಗಳ ರಫ್ತು ಶೇ 29.7ರಷ್ಟು ಇಳಿಕೆಯಾಗಿದೆ ಎಂದು ಮಂಡಳಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.