ನವದೆಹಲಿ: ಪ್ರಸಕ್ತ ವರ್ಷದ ಮಾರ್ಚ್‌ನಲ್ಲಿ ನೌಕರರ ಭವಿಷ್ಯ ನಿಧಿ ಸಂಘಟನೆಗೆ (ಇಪಿಎಫ್‌ಒ) 14.58 ಲಕ್ಷ ಸದಸ್ಯರು ಹೊಸದಾಗಿ ಸೇರ್ಪಡೆಯಾಗಿದ್ದಾರೆ.
ಕಳೆದ ವರ್ಷದ ಮಾರ್ಚ್‌ಗೆ ಹೋಲಿಸಿದರೆ ಸೇರ್ಪಡೆ ಪ್ರಮಾಣದಲ್ಲಿ ಶೇ 1.15ರಷ್ಟು ಹೆಚ್ಚಳವಾಗಿದೆ ಎಂದು ಇಪಿಎಫ್‌ಒ ಬುಧವಾರ ತಿಳಿಸಿದೆ.
ಸದಸ್ಯರ ಸೇರ್ಪಡೆಯಲ್ಲಿ ರಾಜ್ಯವಾರು ಪೈಕಿ ಮಹಾರಾಷ್ಟ್ರ ಮುಂಚೂಣಿಯಲ್ಲಿದ್ದು, ಶೇ 20.24ರಷ್ಟು ಪಾಲನ್ನು ಹೊಂದಿದೆ. ತಮಿಳುನಾಡು, ಕರ್ನಾಟಕ, ಹರಿಯಾಣ, ಗುಜರಾತ್, ದೆಹಲಿ, ಉತ್ತರ ಪ್ರದೇಶ ಮತ್ತು ತೆಲಂಗಾಣದಲ್ಲಿಯೂ ಹೆಚ್ಚು ಸದಸ್ಯರು ಸೇರ್ಪಡೆಯಾಗಿದ್ದಾರೆ.
ಹೊಸ ಸದಸ್ಯರಲ್ಲಿ 18ರಿಂದ 25ರ ವಯೋಮಾನದವರ ಪ್ರಮಾಣ ಶೇ 58ರಷ್ಟಿದೆ. ಒಟ್ಟು 4.45 ಲಕ್ಷ ಸೇರ್ಪಡೆಯಾಗಿದ್ದಾರೆ. ಇವರಲ್ಲಿ ಬಹುತೇಕರು ಮೊದಲ ಬಾರಿಗೆ ಉದ್ಯೋಗಕ್ಕೆ ಸೇರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.