
ಪಿಟಿಐ
ಮುಂಬೈ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು ಬಜೆಟ್ ಮಂಡಿಸಲಿದ್ದಾರೆ. ಹೀಗಾಗಿ, ಅಂದು ಷೇರುಪೇಟೆ ವಹಿವಾಟು ನಡೆಯಲಿದೆ ಎಂದು ಬಿಎಸ್‌ಇ ಮತ್ತು ಎನ್‌ಎಸ್‌ಇ ಶುಕ್ರವಾರ ತಿಳಿಸಿದೆ.
ಬೆಳ್ಳಿಗ್ಗೆ 9.15ರಿಂದ ಮಧ್ಯಾಹ್ನ 3.30ರ ವರೆಗೆ ಷೇರುಪೇಟೆ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದೆ.
ಫೆಬ್ರುವರಿ 1 ಭಾನುವಾರ ಆಗಿದೆ. ಸಾಮಾನ್ಯ ವೇಳೆ ಭಾನುವಾರ ಷೇರುಪೇಟೆಗೆ ರಜೆ ಇರಲಿದ್ದು, ವಹಿವಾಟು ನಡೆಯುವುದಿಲ್ಲ. ಆದರೆ, ಈ ಬಾರಿ ಫೆಬ್ರುವರಿ 1ರಂದು ಬಜೆಟ್ ಮಂಡನೆ ಆಗಲಿದೆ. ಹೀಗಾಗಿ, ಅಂದು ವಿಶೇಷ ವಹಿವಾಟು ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.