ನವದೆಹಲಿ: ಪ್ರಸಕ್ತ ವರ್ಷದ ಮಾರ್ಚ್‌ನಲ್ಲಿ ಈಕ್ವಿಟಿ ಮ್ಯೂಚುವಲ್ ಫಂಡ್ (ಎಂ.ಎಫ್) ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿಕೆ ಪ್ರಮಾಣವು 11 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ ಎಂದು ಭಾರತೀಯ ಮ್ಯೂಚುವಲ್ ಫಂಡ್ ಕಂಪನಿಗಳ ಒಕ್ಕೂಟ (ಎಎಂಎಫ್‌ಐ) ಶುಕ್ರವಾರ ತಿಳಿಸಿದೆ.
ಒಟ್ಟು ₹25,082 ಕೋಟಿ ಹೂಡಿಕೆಯಾಗಿದೆ. ಫೆಬ್ರುವರಿಯಲ್ಲಿ ₹29,303 ಕೋಟಿ ಹೂಡಿಕೆಯಾಗಿತ್ತು. ಇದಕ್ಕೆ ಹೋಲಿಸಿದರೆ ಶೇ 14ರಷ್ಟು ಇಳಿಕೆಯಾಗಿದೆ ಎಂದು ತಿಳಿಸಿದೆ.
ಸೆಕ್ಟೋರಲ್ ಫಂಡ್ಸ್ ಮತ್ತು ಥಿಮ್ಯಾಟಿಕ್ ಫಂಡ್‌ಗಳಲ್ಲಿ ಹೂಡಿಕೆ ಕಡಿಮೆಯಾಗಿದೆ. ಮತ್ತೊಂದೆಡೆ ಟ್ರಂಪ್ ಪ್ರತಿ ಸುಂಕ ನೀತಿಯಿಂದ ಷೇರುಪೇಟೆಯಲ್ಲಿ ಚಂಚಲತೆ ಉಂಟಾಗಿದೆ. ಇದು ಹೂಡಿಕೆ ಪ್ರಮಾಣ ಇಳಿಕೆಗೆ ಕಾರಣವಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.