ನವದೆಹಲಿ: ನವೆಂಬರ್‌ನಲ್ಲಿ ದೇಶದ ಈಕ್ವಿಟಿ ಮ್ಯೂಚುವಲ್ ಫಂಡ್ (ಎಂ.ಎಫ್) ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿಕೆ ಪ್ರಮಾಣವು ಶೇ 14ರಷ್ಟು ಇಳಿಕೆಯಾಗಿದೆ ಎಂದು ಭಾರತೀಯ ಮ್ಯೂಚುವಲ್ ಫಂಡ್ ಕಂಪನಿಗಳ ಒಕ್ಕೂಟ (ಎಎಂಎಫ್‌ಐ) ಮಂಗಳವಾರ ತಿಳಿಸಿದೆ.
ಅಕ್ಟೋಬರ್‌ನಲ್ಲಿ ₹41,887 ಕೋಟಿ ಹೂಡಿಕೆಯಾಗಿತ್ತು. ನವೆಂಬರ್‌ನಲ್ಲಿ ₹35,943 ಕೋಟಿ ಬಂಡವಾಳ ಹೂಡಿಕೆಯಾಗಿದೆ ಎಂದು ತಿಳಿಸಿದೆ.
ನವೆಂಬರ್‌ನಲ್ಲಿ ಮ್ಯೂಚುವಲ್ ಫಂಡ್ ಉದ್ಯಮದಲ್ಲಿ ₹60,295 ಕೋಟಿ ಹೂಡಿಕೆಯಾಗಿದೆ. ಅಕ್ಟೋಬರ್‌ನಲ್ಲಿ ₹2.4 ಲಕ್ಷ ಕೋಟಿ ಹೂಡಿಕೆಯಾಗಿತ್ತು. ಈ ಉದ್ಯಮದ ಸಂಪತ್ತಿನ ನಿರ್ವಹಣಾ ಮೌಲ್ಯವು (ಎಯುಎಂ) ₹68.08 ಲಕ್ಷ ಕೋಟಿ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.