ನವದೆಹಲಿ: ಪ್ರಸಕ್ತ ವರ್ಷದ ಫೆಬ್ರುವರಿಯಲ್ಲಿ ದೇಶದ ಈಕ್ವಿಟಿ ಮ್ಯೂಚುವಲ್ ಫಂಡ್ ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿಕೆ ಪ್ರಮಾಣವು ಶೇ 26ರಷ್ಟು ಇಳಿಕೆಯಾಗಿದೆ ಎಂದು ಭಾರತೀಯ ಮ್ಯೂಚುವಲ್ ಫಂಡ್ ಕಂಪನಿಗಳ ಒಕ್ಕೂಟ (ಎಎಂಎಫ್‌ಐ) ಬುಧವಾರ ತಿಳಿಸಿದೆ.
ಜನವರಿಯಲ್ಲಿ ₹39,668 ಕೋಟಿ ಹೂಡಿಕೆಯಾಗಿದ್ದರೆ, ಫೆಬ್ರುವರಿಯಲ್ಲಿ ₹29,303 ಕೋಟಿ ಹೂಡಿಕೆಯಾಗಿದೆ.
ಸ್ಮಾಲ್‌ಕ್ಯಾಪ್ ಮತ್ತು ಮಿಡ್‌ಕ್ಯಾಪ್ ಯೋಜನೆಯಡಿ ಹೂಡಿಕೆ ಇಳಿಕೆಯಾಗಿರುವುದೇ ಈಕ್ವಿಟಿ ಫಂಡ್‌ನಲ್ಲಿ ಹೂಡಿಕೆ ಕಡಿಮೆಯಾಗಲು ಕಾರಣವಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.