ADVERTISEMENT

ಕಾರ್ಮಿಕರ ರಾಜ್ಯ ವಿಮಾ ನಿಗಮ: ಫೆಬ್ರುವರಿಯಲ್ಲಿ 15.43 ಲಕ್ಷ ಹೊಸ ಸದಸ್ಯರ ಸೇರ್ಪಡೆ

ಪಿಟಿಐ
Published 26 ಏಪ್ರಿಲ್ 2025, 14:02 IST
Last Updated 26 ಏಪ್ರಿಲ್ 2025, 14:02 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಫೆಬ್ರುವರಿ ತಿಂಗಳಿನಲ್ಲಿ ಕಾರ್ಮಿಕರ ರಾಜ್ಯ ವಿಮಾ ನಿಗಮದಡಿ (ಇಎಸ್‌ಐಸಿ) ಹೊಸದಾಗಿ 15.43 ಲಕ್ಷ ಸದಸ್ಯರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯ ತಿಳಿಸಿದೆ.

ಇದೇ ತಿಂಗಳಿನಲ್ಲಿ ಇಎಸ್‌ಐ ಯೋಜನೆಯಡಿ 23,526 ಕಂಪನಿಗಳು ಹೊಸದಾಗಿ ನೋಂದಣಿಯಾಗಿವೆ. ಹಾಗಾಗಿ, ಸಾಮಾಜಿಕ ಭದ್ರತಾ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಸೇರ್ಪಡೆಗೊಳ್ಳಲು ಸಹಕಾರಿಯಾಗಿದೆ ಎಂದು ತಿಳಿಸಿದೆ.

ಸದ್ಯ ಒಟ್ಟು ಸದಸ್ಯರ ಸಂಖ್ಯೆ 2.97 ಕೋಟಿ ಆಗಿದೆ. ಕಳೆದ ವರ್ಷದ ಇದೇ ತಿಂಗಳಿನಲ್ಲಿ 2.91 ಕೋಟಿ ಸದಸ್ಯರಿದ್ದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.