ನವದೆಹಲಿ: ಕಾರ್ಮಿಕರ ರಾಜ್ಯ ವಿಮಾ ನಿಗಮದ (ಇಎಸ್‌ಐಸಿ) ಐ.ಟಿ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡುವುದಕ್ಕೆ ಬುಕಿಂಗ್ ಮಾಡುವುದು ಸೇರಿ ಹಲವು ಸೇವೆಗಳು ಆನ್‌ಲೈನ್‌ನಲ್ಲಿಯೇ ಚಂದಾದಾರರಿಗೆ ದೊರೆಯಲಿವೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯ ತಿಳಿಸಿದೆ.
ಡಿಸೆಂಬರ್ 22ಕ್ಕೆ ನಿಗಮದ ಐ.ಟಿ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆಯು ಸಂಪೂರ್ಣವಾಗಿ ಪೂರ್ಣಗೊಳ್ಳಲಿದೆ. ಆ ಬಳಿಕ ಚಂದಾದಾರರಿಗೆ ಯಾವುದೇ ಅಡೆತಡೆ ಇಲ್ಲದೆ ಸೇವೆ ಲಭಿಸಲಿದೆ ಎಂದು ಹೇಳಿದೆ.
ನಿಗಮವು ಇಎಸ್‌ಐ ಯೋಜನೆಯಡಿ ಚಂದಾದಾರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಆರೋಗ್ಯ ವಿಮೆ ಮತ್ತು ವೈದ್ಯಕೀಯ ಸೇವೆ ನೀಡುತ್ತದೆ. ದೇಶದಾದ್ಯಂತ ಇಎಸ್‌ಐ ಆಸ್ಪತ್ರೆಗಳನ್ನು ಹೊಂದಿದೆ.
ಆಸ್ಪತ್ರೆಗಳಲ್ಲಿ ರೋಗಿಗಳ ನೋಂದಣಿ, ಠೇವಣೆ ಜಮೆ ಸೇರಿದಂತೆ ಎಲ್ಲಾ ವಹಿವಾಟುಗಳು ವೇಗವಾಗಿ ನಡೆಯಲಿವೆ. ಮೂರು ವರ್ಷದವರೆಗೆ ಇದರ ಕಾರ್ಯಾಚರಣೆ ಮತ್ತು ಮೇಲ್ವಿಚಾರಣೆಗೆ ₹312 ಕೋಟಿ ನಿಗದಿಪಡಿಸಲಾಗಿದೆ. ಅಲ್ಲದೆ, ಇಎಸ್‌ಐಸಿ ಮೊಬೈಲ್ ಆ್ಯಪ್ ಅನ್ನು ಬಳಕೆದಾರ ಸ್ನೇಹಿಯಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.