ನವದೆಹಲಿ: ದೇಶದ ರಫ್ತು ವಹಿವಾಟು ಚೇತರಿಸಿಕೊಳ್ಳುವ ಸೂಚನೆ ತೋರಿದೆ. ನವಂಬರ್ ಮೊದಲ ವಾರದಲ್ಲಿ ಶೇ 22ರಷ್ಟು ಹೆಚ್ಚಾಗಿದ್ದು, ₹ 49,950 ಕೋಟಿ ಮೌಲ್ಯದ ಸರಕು ರಫ್ತಾಗಿದೆ ಎಂದು ಸರ್ಕಾರದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
2019ರ ನವೆಂಬರ್ ತಿಂಗಳ ಮೊದಲ ವಾರದಲ್ಲಿ ₹ 40,774 ಕೋಟಿ ಮೌಲ್ಯದ ಸರಕುಗಳು ರಫ್ತಾಗಿದ್ದವು.
ಫಾರ್ಮಾ, ಹರಳು ಮತ್ತು ಚಿನ್ನಾಭರಣ ಹಾಗೂ ಎಂಜಿನಿಯರಿಂಗ್ ವಲಯಗಳ ಆರೋಗ್ಯಕರ ಬೆಳವಣಿಗೆಯಿಂದಾಗಿ ರಫ್ತು ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದಾರೆ.
ಆಮದು ವಹಿವಾಟು ಸಹ ಶೇ 14ರಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಸೆಪ್ಟೆಂಬರ್‌ನಲ್ಲಿ ಸಕಾರಾತ್ಮಕ ಬೆಳವಣಿಗೆ ಕಂಡಿದ್ದ ರಫ್ತು ವಹಿವಾಟು ಅಕ್ಟೋಬರ್‌ನಲ್ಲಿ ಶೇ 5.4ರಷ್ಟು ಇಳಿಕೆಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.