ADVERTISEMENT

ವ್ಯಾ‍ಪಾರ ಕೊರತೆ ಅಂತರ 5 ತಿಂಗಳ ಗರಿಷ್ಠ

ಪಿಟಿಐ
Published 15 ಮೇ 2025, 16:30 IST
Last Updated 15 ಮೇ 2025, 16:30 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಏಪ್ರಿಲ್‌ನಲ್ಲಿ ರಫ್ತಿಗಿಂತಲೂ ಆಮದು ಪ್ರಮಾಣ ಹೆಚ್ಚಾಗಿದ್ದು, ವಿದೇಶಿ ವ್ಯಾಪಾರದ ಕೊರತೆ ಅಂತರವು ಐದು ತಿಂಗಳ ಗರಿಷ್ಠ ಮಟ್ಟಕ್ಕೆ ದಾಖಲಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಈ ತಿಂಗಳಿನಲ್ಲಿ ₹3.29 ಲಕ್ಷ ಕೋಟಿ ಮೌಲ್ಯದ ಸರಕುಗಳನ್ನು ರಫ್ತು ಮಾಡಲಾಗಿದೆ. ಎಲೆಕ್ಟ್ರಾನಿಕ್ಸ್‌ ಮತ್ತು ಎಂಜಿನಿಯರಿಂಗ್‌ ಸರಕುಗಳು ಹೆಚ್ಚು ರಫ್ತಾಗಿವೆ. 

ಇದೇ ತಿಂಗಳಿನಲ್ಲಿ ₹5.49 ಲಕ್ಷ ಕೋಟಿ ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಳ್ಳಲಾಗಿದೆ. ಒಟ್ಟು ವ್ಯಾಪಾರ ಕೊರತೆ ಅಂತರವು ₹2.20 ಲಕ್ಷ ಕೋಟಿಯಾಗಿದೆ ಎಂದು ತಿಳಿಸಿದೆ. 

ADVERTISEMENT

ರಫ್ತು ಮೌಲ್ಯಕ್ಕಿಂತ ಆಮದು ಮೌಲ್ಯ ಹೆಚ್ಚಿದ್ದರೆ ಅದನ್ನು ವ್ಯಾಪಾರ ಕೊರತೆ ಎಂದು ಕರೆಯಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.