ರಾಜೀವ್ ಮೆಮಾನಿ
-ಲಿಂಕ್ಡ್ ಇನ್ ಚಿತ್ರ
ನವದೆಹಲಿ: ಅರ್ನ್ಸ್ಟ್ ಆ್ಯಂಡ್ ಯಂಗ್ (ಇವೈ) ಇಂಡಿಯಾ ಸಂಸ್ಥೆಯ ಅಧ್ಯಕ್ಷ ರಾಜೀವ್ ಮೆಮಾನಿ ಅವರು ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) 2025–26ನೆಯ ಅವಧಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಟಾಟಾ ಕೆಮಿಕಲ್ಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಆಗಿರುವ ಆರ್. ಮುಕುಂದನ್ ಅವರು ಸಿಐಐ ನಿಯೋಜಿತ ಅಧ್ಯಕ್ಷರಾಗಿ (2025–26ನೇ ಅವಧಿ) ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಭಾರತ್ ಬಯೋಟೆಕ್ ಇಂಟರ್‌ನ್ಯಾಷನಲ್ ಲಿಮಿಟೆಡ್‌ನ ಸಹಸಂಸ್ಥಾಪಕಿ, ವ್ಯವಸ್ಥಾಪಕ ನಿರ್ದೇಶಕಿ ಸುಚಿತ್ರಾ ಕೆ. ಎಲಾ ಅವರು ಸಿಐಐ ಉಪಾಧ್ಯಕ್ಷೆ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.