ADVERTISEMENT

ನವದೆಹಲಿ: ಎಫ್‌ಡಿಐ ಶೇ 18ರಷ್ಟು ಹೆಚ್ಚಳ

ಪಿಟಿಐ
Published 1 ಡಿಸೆಂಬರ್ 2025, 15:27 IST
Last Updated 1 ಡಿಸೆಂಬರ್ 2025, 15:27 IST
ಎಫ್‌ಡಿಐ
ಎಫ್‌ಡಿಐ   

ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್‌ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲಿನ ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಪ್ರಮಾಣ ಶೇ 18ರಷ್ಟು ಹೆಚ್ಚಳವಾಗಿದ್ದು, ₹3.15 ಲಕ್ಷ ಕೋಟಿಯಷ್ಟಾಗಿದೆ. ಇದೇ ಅವಧಿಯಲ್ಲಿ ಅಮೆರಿಕದಿಂದ ವಿದೇಶಿ ನೇರ ಹೂಡಿಕೆ ಪ್ರಮಾಣದಲ್ಲಿ ದುಪ್ಪಟ್ಟು ಹೆಚ್ಚಾಗಿದ್ದು, ₹59,283 ಕೋಟಿಯಷ್ಟಾಗಿದೆ.

ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ವಿದೇಶಿ ನೇರ ಹೂಡಿಕೆ ₹2.66 ಲಕ್ಷ ಕೋಟಿಯಷ್ಟಾಗಿತ್ತು ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ. 

ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ₹1.48 ಲಕ್ಷ ಕೋಟಿ ಒಳಹರಿವು ಆಗಿದೆ. ಕಳೆದ ಸೆಪ್ಟೆಂಬರ್ ತ್ರೈಮಾಸಿಕಕ್ಕೆ ಹೋಲಿಸಿದರೆ ಇದು ಶೇ 21ರಷ್ಟು ಹೆಚ್ಚಳ ಎಂದು ಹೇಳಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.