ADVERTISEMENT

ವಿದೇಶಿ ನೇರ ಬಂಡವಾಳ ಹೂಡಿಕೆ ಶೇ 45ರಷ್ಟು ಏರಿಕೆ

ಪಿಟಿಐ
Published 1 ಡಿಸೆಂಬರ್ 2024, 13:47 IST
Last Updated 1 ಡಿಸೆಂಬರ್ 2024, 13:47 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ದೇಶದಲ್ಲಿ ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್‌–ಸೆಪ್ಟೆಂಬರ್‌ ಅವಧಿಯಲ್ಲಿ ₹2.51 ಲಕ್ಷ ಕೋಟಿ ವಿದೇಶಿ ನೇರ ಬಂಡವಾಳ (ಎಫ್‌ಡಿಐ) ಹೂಡಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

2023–24ನೇ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹1.73 ಲಕ್ಷ ಕೋಟಿ ಹೂಡಿಕೆಯಾಗಿತ್ತು. ಇದಕ್ಕೆ ಹೋಲಿಸಿದರೆ ಶೇ 45ರಷ್ಟು ಹೆಚ್ಚಳವಾಗಿದೆ. ಆರೋಗ್ಯ, ಕಂಪ್ಯೂಟರ್‌, ಟೆಲಿಕಾಂ ಹಾಗೂ ಫಾರ್ಮಾ ವಲಯದಲ್ಲಿ ಹೂಡಿಕೆ ಪ್ರಮಾಣ ಹೆಚ್ಚಿದೆ.

ಏಪ್ರಿಲ್‌ ತ್ರೈಮಾಸಿಕದಲ್ಲಿ ₹1.36 ಲಕ್ಷ ಕೋಟಿ ಹಾಗೂ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ₹1.15 ಲಕ್ಷ ಕೋಟಿ ಹೂಡಿಕೆಯಾಗಿದೆ ಎಂದು ಕೈಗಾರಿಕಾ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (ಡಿಪಿಐಐಟಿ) ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.