
ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ ಗರಿಷ್ಠ ಶೇಕಡ 49ರಷ್ಟು ವಿದೇಶಿ ನೇರ ಹೂಡಿಕೆಗೆ (ಎಫ್‌ಡಿಐ) ಅವಕಾಶ ಕಲ್ಪಿಸಲು ಕೇಂದ್ರ ಸರ್ಕಾರ ಆಲೋಚಿಸಿದೆ ಎಂದು ಮೂಲಗಳು ತಿಳಿಸಿವೆ.
ಈ ವಿಚಾರವಾಗಿ ಕೇಂದ್ರ ಹಣಕಾಸು ಸಚಿವಾಲಯವು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಜೊತೆ ಚರ್ಚೆ ನಡೆಸಿದೆ. ಕಳೆದ ಎರಡು ತಿಂಗಳುಗಳಿಂದ ಚರ್ಚೆ ನಡೆಯುತ್ತಿದೆ ಎಂದು ಮೂಲವೊಂದು ಹೇಳಿದೆ. ಆದರೆ ಈ ವಿಚಾರವಾಗಿ ಅಂತಿಮ ತೀರ್ಮಾನ ಇನ್ನೂ ಆಗಿಲ್ಲ.
ಭಾರತದ ಬ್ಯಾಂಕಿಂಗ್ ಉದ್ಯಮದಲ್ಲಿ ವಿದೇಶಿ ಕಂಪನಿಗಳು ಹೆಚ್ಚಿನ ಮಟ್ಟದ ಆಸಕ್ತಿ ತೋರಿಸಿವೆ. ದುಬೈ ಮೂಲದ ಎಮಿರೇಟ್ಸ್ ಎನ್‌ಬಿಡಿ ಸಂಸ್ಥೆಯು ಖಾಸಗಿ ವಲಯದ ಆರ್‌ಬಿಎಲ್ ಬ್ಯಾಂಕ್‌ನ ಶೇಕಡ 60ರಷ್ಟು ಪಾಲನ್ನು ಖರೀದಿಸಿದೆ. ಯೆಸ್ ಬ್ಯಾಂಕ್‌ನ ಶೇ 20ರಷ್ಟು ಪಾಲನ್ನು ಜಪಾನ್‌ನ ಸುಮಿಟೊಮೊ ಮಿಟ್ಸುಯಿ ಬ್ಯಾಂಕಿಂಗ್ ಕಾರ್ಪ್ ಖರೀದಿಸಿ, ನಂತರ ಹೆಚ್ಚುವರಿಯಾಗಿ ಶೇ 4.99ರಷ್ಟು ಪಾಲು ಖರೀದಿಸಿದೆ.
ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಬಗ್ಗೆಯೂ ವಿದೇಶಿ ಹೂಡಿಕೆದಾರರು ಆಸಕ್ತಿ ವಹಿಸಿದ್ದಾರೆ. ಈ ಬ್ಯಾಂಕ್
ಗಳಲ್ಲಿ ವಿದೇಶಿ ನೇರ ಹೂಡಿಕೆಗೆ ಇರುವ ಮಿತಿಯನ್ನು ಹೆಚ್ಚಿಸಿದರೆ ಅವುಗಳಿಗೆ ಭವಿಷ್ಯದಲ್ಲಿ ಹೆಚ್ಚಿನ ಬಂಡವಾಳ ಹೊಂದಲು ಆಗುತ್ತದೆ ಎಂದು ಮೂಲಗಳು ವಿವರಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.