ನವದೆಹಲಿ: ಈ ಹಣಕಾಸು ವರ್ಷದ ಏಪ್ರಿಲ್–ಸೆಪ್ಟೆಂಬರ್ ಅವಧಿಯಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ₹ 1.87 ಲಕ್ಷ ಕೋಟಿಗಳಷ್ಟಾಗಿದೆ.
2018–19ನೇ ಹಣಕಾಸು ವರ್ಷದ ಇದೇ ಅವಧಿಯಲ್ಲಿನ ಎಫ್‌ಡಿಐ ಒಳಹರಿವು ₹ 1.63 ಲಕ್ಷ ಕೋಟಿಗಳಷ್ಟಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಶೇ 15ರಷ್ಟು ಏರಿಕೆಯಾಗಿದೆ. ಸೇವೆ, ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್, ನಿರ್ಮಾಣ, ವ್ಯಾಪಾರ, ಆಟೊಮೊಬೈಲ್, ಔಷಧ, ರಾಸಾಯನಿಕ ಮತ್ತು ವಿದ್ಯುತ್ ವಲಯಗಳಲ್ಲಿ ಹೆಚ್ಚು ಹೂಡಿಕೆಯಾಗಿದೆ.
‘ಆರ್ಥಿಕತೆಯು ಮಂದಗತಿಯಲ್ಲಿ ಸಾಗುತ್ತಿದ್ದರೂ ಎಫ್‌ಡಿಐ ಒಳಹರಿವಿನ ಮೇಲೆ ಪರಿಣಾಮ ಬೀರಿಲ್ಲ’ ಎಂದು ಕೈಗಾರಿಕಾ ಉತ್ತೇಜನ ಮತ್ತು ಆಂತರಿಕ ವ್ಯಾಪಾರ ಇಲಾಖೆಯ (ಡಿಪಿಐಐಟಿ) ಕಾರ್ಯದರ್ಶಿ ಗುರುಪ್ರಸಾದ್ ಮಹಾಪಾತ್ರಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.