ADVERTISEMENT

ಫೆಡರಲ್ ಬ್ಯಾಂಕ್‌ ಲಾಭ ಹೆಚ್ಚಳ

ಪಿಟಿಐ
Published 16 ಜನವರಿ 2026, 14:08 IST
Last Updated 16 ಜನವರಿ 2026, 14:08 IST
.
.   

ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಅಕ್ಟೋಬರ್–ಡಿಸೆಂಬರ್ ತ್ರೈಮಾಸಿಕದಲ್ಲಿ ಖಾಸಗಿ ವಲಯದ ಫೆಡರಲ್ ಬ್ಯಾಂಕ್‌ನ ನಿವ್ವಳ ಲಾಭದಲ್ಲಿ ಶೇ 9ರಷ್ಟು ಹೆಚ್ಚಳವಾಗಿದೆ. 

ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ಬ್ಯಾಂಕ್‌ ₹955 ಕೋಟಿ ಲಾಭ ಗಳಿಸಿತ್ತು. ಈ ಬಾರಿ ₹1,041 ಕೋಟಿ ಲಾಭ ಗಳಿಸಿದೆ ಎಂದು ಬ್ಯಾಂಕ್ ಷೇರುಪೇಟೆಗೆ ಶುಕ್ರವಾರ ತಿಳಿಸಿದೆ.

ಬ್ಯಾಂಕ್‌ನ ಒಟ್ಟು ವರಮಾನ ಶೇ 7,968 ಕೋಟಿ, ಬಡ್ಡಿ ಮೂಲಕ ಗಳಿಸಿದ ವರಮಾನ ₹6,867 ಕೋಟಿಗೆ ಹೆಚ್ಚಳವಾಗಿದೆ. ವಸೂಲಾಗದ ಸಾಲದ ಪ್ರಮಾಣ ಶೇ 1.95ರಿಂದ ಶೇ 1.72ಕ್ಕೆ ಇಳಿದಿದೆ. ನಿವ್ವಳ ಎನ್‌ಪಿಎ ಶೇ 0.49ರಿಂದ ಶೇ 0.42ಕ್ಕೆ ಕಡಿಮೆ ಆಗಿದೆ. ಬ್ಯಾಂಕ್‌ನ ಬಂಡವಾಳ ಮೀಸಲು ಅನುಪಾತ (ಸಿಎಆರ್‌) ಶೇ 15.2ರಷ್ಟಾಗಿದೆ ಎಂದು ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.