
ಅನಿಲ್ ಅಂಬಾನಿ
ಪಿಟಿಐ ಸಂಗ್ರಹ ಚಿತ್ರ
ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಕಾಯ್ದೆಯಡಿ ನೀಡಿರುವ ಸಮನ್ಸ್ ವಿಚಾರಣೆಗೆ ವರ್ಚ್ಯುವಲ್ ಆಗಿ ಹಾಜರಾಗುತ್ತೇನೆ ಎಂದು ರಿಲಯನ್ಸ್ ಸಮೂಹದ ಮುಖ್ಯಸ್ಥ ಮುಖ್ಯಸ್ಥ ಅನಿಲ್ ಅಂಬಾನಿ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಹೇಳಿದ್ದಾರೆ.
‘ತನಿಖೆಗೆ ಪೂರ್ಣ ಸಹಕಾರ ನೀಡುವುದಾಗಿ ಇ.ಡಿಗೆ ಪತ್ರ ಬರೆದಿದ್ದಾರೆ’ ಎಂದು ಅವರ ವಕ್ತಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆಮಾ ಕಾಯ್ದೆಯಡಿ ಹೇಳಿಕೆ ದಾಖಲಿಸಿಕೊಳ್ಳಲು ಖುದ್ದಾಗಿ ಹಾಜರಿರಬೇಕು ಎಂದು ಅಂಬಾನಿಗೆ ಇ.ಡಿ ಸಮನ್ಸ್ ಜಾರಿ ಮಾಡಿತ್ತು.
ಜೈಪುರ–ರೀಂಗಸ್ ಹೆದ್ದಾರಿ ಯೋಜನೆಲ್ಲಿ ಸುಮಾರು ₹ 100 ಕೋಟಿ ಹಣವನ್ನು ಹವಾಲ ಮಾರ್ಗದಲ್ಲಿ ವಿದೇಶಕ್ಕೆ ರವಾನಿಸಲಾಗಿದೆ ಎನ್ನುವ ಆರೋಪ ಪ್ರಕರಣದಲ್ಲಿ ಇ.ಡಿ ತನಿಖೆ ನಡೆಸುತ್ತಿದೆ.
ಪ್ರಕರಣ ಸಂಬಧ ಹವಾಲ ಡೀಲರ್‌ಗಳು ಸೇರಿದಂತೆ ಹಲವರ ಹೇಳಿಕೆ ದಾಖಲಿಸಿಕೊಂಡಿದ್ದ ಇ.ಡಿ ಬಳಿಕ ಅಂಬಾನಿಗೆ ಸಮನ್ಸ್ ಜಾರಿ ಮಾಡಿತ್ತು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.