ADVERTISEMENT

ಉಕ್ರೇನ್–ರಷ್ಯಾ ಯುದ್ಧ: ರಸಗೊಬ್ಬರ ಸಬ್ಸಿಡಿ ಹೆಚ್ಚಳ ಸಾಧ್ಯತೆ

ಪಿಟಿಐ
Published 13 ಮಾರ್ಚ್ 2022, 15:52 IST
Last Updated 13 ಮಾರ್ಚ್ 2022, 15:52 IST

ನವದೆಹಲಿ: ಉಕ್ರೇನ್–ರಷ್ಯಾ ಯುದ್ಧದ ಕಾರಣದಿಂದಾಗಿ, ಕೇಂದ್ರ ಸರ್ಕಾರವು ರಸಗೊಬ್ಬರಗಳಿಗೆ ನೀಡುವ ಸಬ್ಸಿಡಿ ಮೊತ್ತವು ಪ್ರಸಕ್ತ ಹಣಕಾಸು ವರ್ಷದಲ್ಲಿ ₹ 10 ಸಾವಿರ ಕೋಟಿಯಷ್ಟು ಹೆಚ್ಚಳ ಆಗಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಮೆರಿಕ ಮತ್ತು ಒಪೆಕ್ ದೇಶಗಳು ಕಚ್ಚಾ ತೈಲ ಉತ್ಪಾದನೆಯನ್ನು ಹೆಚ್ಚಿಸುವುದರಿಂದಾಗಿ ಕಚ್ಚಾ ತೈಲ ಬೆಲೆಯು ಇನ್ನು ಎರಡರಿಂದ ಮೂರು ತಿಂಗಳಲ್ಲಿ ಕಡಿಮೆ ಆಗಬಹುದು ಎಂದೂ ಅವರು ಹೇಳಿದ್ದಾರೆ. ಬಜೆಟ್‌ನ ಪರಿಷ್ಕೃತ ಅಂದಾಜಿನ ಪ್ರಕಾರ ರಸಗೊಬ್ಬರಗಳಿಗೆ ನೀಡುವ ಸಬ್ಸಿಡಿ ಮೊತ್ತವು ₹ 1.40 ಲಕ್ಷ ಕೋಟಿಗಿಂತ ಹೆಚ್ಚಾಗಲಿದೆ.

ಯೂರಿಯಾ ತಯಾರಿಕೆಯಲ್ಲಿ ಪ್ರಮುಖ ಕಚ್ಚಾವಸ್ತುವಾಗಿರುವ ನೈಸರ್ಗಿಕ ಅನಿಲದ ಬೆಲೆಯು ಹೆಚ್ಚಳವಾಗುತ್ತಿರುವುದರಿಂದಾಗಿ, ಯೂರಿಯಾದ ದೇಶಿ ಮಾರಾಟ ದರ ಹೆಚ್ಚಾಗುವ ಸಾಧ್ಯತೆ ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.