ADVERTISEMENT

ಎಫ್‌ಐಐ: ₹4,306 ಕೋಟಿ ಹಿಂತೆಗೆತ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2022, 13:01 IST
Last Updated 10 ಡಿಸೆಂಬರ್ 2022, 13:01 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಐಐ) ಡಿಸೆಂಬರ್‌ ತಿಂಗಳಿನಲ್ಲಿ ದೇಶದ ಷೇರುಪೇಟೆಗಳಿಂದ ಬಂಡವಾಳ ಹಿಂದಕ್ಕೆ ಪಡೆಯಲು ಆರಂಭಿಸಿದ್ದಾರೆ.

ನ್ಯಾಷನಲ್‌ ಸೆಕ್ಯುರಿಟೀಸ್‌ ಡೆಪಾಸಿಟರಿ ಲಿಮಿಟೆಡ್‌ನಲ್ಲಿ (ಎನ್‌ಎಸ್‌ಡಿಎಲ್‌) ಇರುವ ಮಾಹಿತಿಯ ಪ್ರಕಾರ, ಡಿಸೆಂಬರ್‌ 9ಕ್ಕೆ ಕೊನೆಗೊಂಡ ವಾರದಲ್ಲಿ ₹4,306 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಇದಕ್ಕೂ ಹಿಂದಿನ ವಾರ ಅಂದರೆ, ನವೆಂಬರ್‌ 28ರಿಂದ ಡಿಸೆಂಬರ್‌ 2ರವರೆಗೆ ನಡೆದ ವಹಿವಾಟಿನಲ್ಲಿ ₹ 9,844 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದರು. ನವೆಂಬರ್‌ ತಿಂಗಳಿನಲ್ಲಿ ಎಫ್‌ಐಐ ಒಳಹರಿವು ₹22,546 ಕೋಟಿಯಷ್ಟು ಆಗಿತ್ತು.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ದೇಶದ ಷೇರುಪೇಟೆಗಳಲ್ಲಿ ಲಾಭ ಗಳಿಕೆಗೆ ಮುಂದಾಗಿದ್ದಾರೆ. ಹೀಗಾಗಿ ಷೇರುಗಳನ್ನು ಮಾರಾಟ ಮಾಡುತ್ತಿದ್ದಾರೆ. ಆದರೆ, ದೇಶಿ ಸಾಂಸ್ಥಿಕ ಹೂಡಿಕೆದಾರರು (ಡಿಐಐ) ವ್ಯವಸ್ಥಿತ ಹೂಡಿಕೆ ಯೋಜನೆಗಳ (ಎಸ್‌ಐಪಿ) ಮೂಲಕ ಬಂಡವಾಳ ತೊಡಗಿಸುತ್ತಿದ್ದಾರೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ADVERTISEMENT

ಡಿಸೆಂಬರ್‌ನಲ್ಲಿ ಈವರೆಗೆ ನಡೆದಿರುವ ವಹಿವಾಟಿನಲ್ಲಿ ಒಂದು ದಿನ ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿಯೂ ಎಫ್‌ಐಐ ಬಂಡವಾಳ ಹಿಂತೆಗೆತ ಕಂಡುಬಂದಿದೆ. ₹ 5,500 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಒಟ್ಟಾರೆಯಾಗಿ ಷೇರುಪೇಟೆಯ ಮೇಲೆ ಒತ್ತಡ ಉಂಟಾಗಿದೆ ಎಂದು ಮೋತಿಲಾಲ್‌ ಓಸ್ವಾಲ್‌ ಫೈನಾನ್ಶಿಯಲ್‌ ಸರ್ವೀಸಸ್‌ನ ರಿಟೇಲ್‌ ರಿಸರ್ಚ್‌ ವಿಭಾಗದ ಮುಖ್ಯಸ್ಥ ಸಿದ್ದಾರ್ಥ ಖೇಮ್ಕಾ ತಿಳಿಸಿದ್ದಾರೆ.

ಷೇರುಪೇಟೆಗಳ ವಾರದ ವಹಿವಾಟು ನಕಾರಾತ್ಮಕವಾಗಿ ಅಂತ್ಯವಾಗಿದೆ. ಬಿಎಸ್‌ಇ ಸೆನ್ಸೆಕ್ಸ್‌ 687 ಅಂಶ ಇಳಿಕೆ ಕಂಡರೆ, ಎನ್‌ಎಸ್‌ಇ ನಿಫ್ಟಿ 199 ಅಂಶ ಇಳಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.