ADVERTISEMENT

ಪೆಟ್ರೋಲ್, ಡೀಸೆಲ್ ಎಕ್ಸೈಸ್‌ ಸುಂಕ ಮೂಲಸೌಕರ್ಯ ಯೋಜನೆಗಳಿಗೆ ಬಳಕೆ: ಕೇಂದ್ರ

ಪಿಟಿಐ
Published 20 ಜುಲೈ 2021, 15:04 IST
Last Updated 20 ಜುಲೈ 2021, 15:04 IST
ಸಾಂದರ್ಭಿಕ ಚಿತ್ರ – ಕೃಪೆ: ಐಸ್ಟಾಕ್
ಸಾಂದರ್ಭಿಕ ಚಿತ್ರ – ಕೃಪೆ: ಐಸ್ಟಾಕ್   

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್‌ ಸುಂಕದ ಮೊತ್ತವನ್ನು ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಸಂಪನ್ಮೂಲ ಕ್ರೂಡೀಕರಣಕ್ಕೆ ಬಳಸಲಾಗಿದೆ. ದೇಶದ ಸದ್ಯದ ಹಣಕಾಸು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಣಕಾಸು ಇಲಾಖೆಯ ರಾಜ್ಯ ಖಾತೆ ಸಚಿವ ಪಂಕಜ್ ಚೌಧರಿ ತಿಳಿಸಿದ್ದಾರೆ.

ಪೆಟ್ರೋಲ್ ದರ ಮೇ ತಿಂಗಳಲ್ಲಿ ಲೀಟರ್‌ಗೆ ₹ 3.83 ಹೆಚ್ಚಾಗಿತ್ತು. ಜೂನ್‌ನಲ್ಲಿ ₹ 4.58, ಜುಲೈನಲ್ಲಿ (16ರ ವರೆಗೆ) ₹ 2.73 ಹೆಚ್ಚಾಗಿದೆ ಎಂದು ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಸಚಿವರು ತಿಳಿಸಿದ್ದಾರೆ.

ಏಪ್ರಿಲ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕ್ರಮವಾಗಿ ಪ್ರತಿ ಲೀಟರ್‌ಗೆ 16 ಪೈಸೆ ಮತ್ತು 14 ಪೈಸೆ ಇಳಿಕೆಯಾಗಿತ್ತು ಎಂದು ಅವರು ತಿಳಿಸಿದ್ದಾರೆ.

ADVERTISEMENT

ಡೀಸೆಲ್‌ನ ಚಿಲ್ಲರೆ ಮಾರಾಟ ದರ ಮೇ ತಿಂಗಳಲ್ಲಿ ₹ 4.42ರಷ್ಟು ಹೆಚ್ಚಾಗಿತ್ತು. ಜೂನ್‌ನಲ್ಲಿ ₹ 4.03, ಜುಲೈನಲ್ಲಿ (16ರ ವರೆಗೆ) ₹0.69ರಷ್ಟು ಹೆಚ್ಚಾಗಿದೆ.

ಪ್ರಸಕ್ತ ಹಣಕಾಸು ವರ್ಷದ ಮೊದಲ ಮೂರು ತಿಂಗಳ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್‌ನ ಎಕ್ಸೈಸ್‌ ಸುಂಕವಾಗಿ ₹ 94,181 ಕೋಟಿ ಸಂಗ್ರಹಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಪೆಟ್ರೋಲ್‌ ಮತ್ತು ಡೀಸೆಲ್ ಮೇಲಿನ ಎಕ್ಸೈಸ್‌ ಸುಂಕವನ್ನು ಕಳೆದ ವರ್ಷ ಗರಿಷ್ಠ ಮಟ್ಟಕ್ಕೆ ಏರಿಕೆ ಮಾಡಿದ ಬಳಿಕ ಸುಂಕ ಸಂಗ್ರಹವು ಶೇಕಡ 88ರಷ್ಟು ಹೆಚ್ಚಾಗಿದ್ದು ₹ 3.35 ಲಕ್ಷ ಕೋಟಿಗೆ ತಲುಪಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ರಾಮೇಶ್ವರ್ ತೆಲಿ ಅವರು ಸೋಮವಾರ ಲೋಕಸಭೆಗೆ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.