ADVERTISEMENT

ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಗೆ ₹1.29 ಲಕ್ಷ ಕೋಟಿ ಲಾಭ

ಪಿಟಿಐ
Published 26 ಫೆಬ್ರುವರಿ 2025, 13:06 IST
Last Updated 26 ಫೆಬ್ರುವರಿ 2025, 13:06 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ಸರ್ಕಾರಿ ಸ್ವಾಮ್ಯದ 12 ಬ್ಯಾಂಕ್‌ಗಳು, ₹1.29 ಲಕ್ಷ ಕೋಟಿ ನಿವ್ವಳ ಲಾಭಗಳಿಸಿವೆ. ಹಿಂದಿನ ಆರ್ಥಿಕ ವರ್ಷದ ಇದೇ ಅವಧಿಗೆ ಹೋಲಿಸಿದರೆ ಲಾಭದ ಪ್ರಮಾಣದಲ್ಲಿ ಶೇ 31.3ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

ಬ್ಯಾಂಕ್‌ಗಳ ಲಾಭ ಗಳಿಕೆ, ಆಸ್ತಿಯ ಗುಣಮಟ್ಟ ಸುಧಾರಣೆ ಹಾಗೂ ಬಂಡವಾಳ ಕೂಡ ಸದೃಢವಾಗಿದೆ. ನಿವ್ವಳ ಎನ್‌ಪಿಎ ಶೇ 0.59ಕ್ಕೆ ಇಳಿದಿದೆ ಎಂದು ಹೇಳಿದೆ.

ಬ್ಯಾಂಕ್‌ಗಳ ಒಟ್ಟು ವಹಿವಾಟು ಶೇ 11ರಷ್ಟು ಏರಿಕೆಯಾಗಿದೆ. ಈ ಅವಧಿಯಲ್ಲಿ ₹242.27 ಲಕ್ಷ ಕೋಟಿ ವಹಿವಾಟು ನಡೆಸಿವೆ ಎಂದು ತಿಳಿಸಿದೆ.

ADVERTISEMENT

5ಕ್ಕೆ ಪ್ರಗತಿ ಪರಿಶೀಲನೆ:

ಹಣಕಾಸು ವ್ಯವಹಾರಗಳ ಕಾರ್ಯದರ್ಶಿ ಎಂ. ನಾಗರಾಜು ಅವರ ಅಧ್ಯಕ್ಷತೆಯಲ್ಲಿ ಮಾರ್ಚ್‌ 5ರಂದು ಬ್ಯಾಂಕ್‌ಗಳ ‍ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.